ಮಹಾರಾಣಾ ಪ್ರತಾಪ್ ಸಿಂಹರ ಶೌರ್ಯ ಸ್ಮರಣೆ ; ಮುಧೋಳದಲ್ಲಿ ಜಯಂತಿ ಕಾರ್ಯಕ್ರಮಕ್ಕೆ ವಿನಯ್ ತಿಮ್ಮಾಪುರ ಭಾಗಿ
ಬಾಗಲಕೋಟೆ, 17 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮಹಾರಾಣಾ ಪ್ರತಾಪ್ ಸಿಂಹ ಜಯಂತಿ” ಕಾರ್ಯಕ್ರಮವು ಸಂಭ್ರಮ ಹಾಗೂ ಗೌರವದ ವಾತಾವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ವಿನಯ ತಿಮ್ಮ
ಮಹಾರಾಣಾ ಪ್ರತಾಪ್ ಸಿಂಹರ ಶೌರ್ಯ ಸ್ಮರಣೆ ; ಮುಧೋಳದಲ್ಲಿ ಜಯಂತಿ ಕಾರ್ಯಕ್ರಮಕ್ಕೆ ವಿನಯ್ ತಿಮ್ಮಾಪುರ ಭಾಗಿ


ಬಾಗಲಕೋಟೆ, 17 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮಹಾರಾಣಾ ಪ್ರತಾಪ್ ಸಿಂಹ ಜಯಂತಿ” ಕಾರ್ಯಕ್ರಮವು ಸಂಭ್ರಮ ಹಾಗೂ ಗೌರವದ ವಾತಾವರಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ವಿನಯ ತಿಮ್ಮಾಪುರ ಅವರು ಭಾಗವಹಿಸಿ, ಮಹಾರಾಣಾ ಪ್ರತಾಪ್ ಸಿಂಹ ಅವರ ಅಪ್ರತಿಮ ಶೌರ್ಯ, ಸಾಹಸ ಮತ್ತು ದೇಶಭಕ್ತಿಯನ್ನು ಸ್ಮರಿಸಿದರು.

ಮಾತೃಭೂಮಿಯ ರಕ್ಷಣೆಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಮಹಾರಾಣಾ ಪ್ರತಾಪ್ ಸಿಂಹ ಅವರ ಧೈರ್ಯ, ಸ್ವಾಭಿಮಾನ ಮತ್ತು ಹೋರಾಟದ ಇತಿಹಾಸವು ಇಂದಿನ ಯುವ ಪೀಳಿಗೆಗೆ ಸದಾ ಪ್ರೇರಣೆಯಾಗಿದೆ ಎಂದು ವಿನಯ್ ತಿಮ್ಮಾಪುರ ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡರು, ಮಹಾರಾಣಾ ಪ್ರತಾಪ್ ಸಿಂಹ ಅವರು ಶೌರ್ಯ, ತ್ಯಾಗ ಮತ್ತು ರಾಷ್ಟ್ರಪ್ರೇಮದ ಪ್ರತೀಕವಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಮುಧೋಳ ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾರಾಣಾ ಪ್ರತಾಪ್ ಸಿಂಹ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಪವನ ರಜಪೂತ್, ಸುರೇಶ ಕೋಡಗ, ಸಂತೋಷ ಪಾಲೋಜಿ, ಮುರುಗೇಶ ಇಟ್ಟಂಗಿ, ವಿಜಯ್ ನಲವಡೆ ಸೇರಿದಂತೆ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande