ವಿದ್ಯುತ್ ಗುತ್ತಿಗೆದಾರರು, ಗ್ರಾಹಕರು ಹಾಗೂ ರೈತ ಸಂಘಟನೆಗಳ ಬೃಹತ್ ಪ್ರತಿಭಟನೆ
ವಿಜಯಪುರ, 17 ಜೂನ್ (ಹಿ.ಸ.) : ಆಂಕರ್ : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ), ವಿಜಯಪುರ ಜಿಲ್ಲಾ ವಿದ್ಯುತ್ ಗುತ್ತಿಗೆದಾರರ ಸಂಘ (ರಿ), ವಿದ್ಯುತ್ ಗ್ರಾಹಕರು ಹಾಗೂ ವಿವಿಧ ರೈತ ಸಂಘಟನೆಗಳ ಪದಾಧಿಕಾರಿಗಳ ನೇತೃತ್ವದಲ್ಲಿ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ
Sabhe


ವಿಜಯಪುರ, 17 ಜೂನ್ (ಹಿ.ಸ.) :

ಆಂಕರ್ : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ), ವಿಜಯಪುರ ಜಿಲ್ಲಾ ವಿದ್ಯುತ್ ಗುತ್ತಿಗೆದಾರರ ಸಂಘ (ರಿ), ವಿದ್ಯುತ್ ಗ್ರಾಹಕರು ಹಾಗೂ ವಿವಿಧ ರೈತ ಸಂಘಟನೆಗಳ ಪದಾಧಿಕಾರಿಗಳ ನೇತೃತ್ವದಲ್ಲಿ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು ವಿದ್ಯುತ್ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.

ಬಳಿಕ ಪ್ರತಿಭಟನಾಕಾರರು ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ವಿದ್ಯುತ್ ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳು, ಗ್ರಾಹಕರ ಹಿತಾಸಕ್ತಿ ಹಾಗೂ ರೈತರ ವಿದ್ಯುತ್ ಸಂಬಂಧಿತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ತ್ವರಿತವಾಗಿ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ವಿದ್ಯುತ್ ಕ್ಷೇತ್ರದಲ್ಲಿ ಗುತ್ತಿಗೆದಾರರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಬೇಕು, ಬಾಕಿ ಇರುವ ಬಿಲ್ಲುಗಳ ಪಾವತಿ, ಕಾಮಗಾರಿಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರ, ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ನಿರಂತರ ವಿದ್ಯುತ್ ಸೌಲಭ್ಯ ಕಲ್ಪಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಾಗಿದ್ದವು.

ಸರ್ಕಾರ ಮತ್ತು ವಿದ್ಯುತ್ ಇಲಾಖೆಯ ಅಧಿಕಾರಿಗಳು ತಮ್ಮ ಬೇಡಿಕೆಗಳಿಗೆ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ರೈತ ಸಂಘಟನೆಗಳ ಮುಖಂಡರು, ಗ್ರಾಹಕರು ಸೇರಿದಂತೆ ಹಲವರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande