ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ
ಬಾಗಲಕೋಟೆ, 17 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯದೊಂದಿಗೆ ಹಮ್ಮಿಕೊಳ್ಳಲಾಗುತ್ತಿರುವ ಹಕ್ಕೋತ್ತಾಯದ ಪಾದಯಾತ್ರೆಯ ಕುರಿತು ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಶಾಸಕರಿಗೆ ಸಚಿವ
Sabhe


ಬಾಗಲಕೋಟೆ, 17 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯದೊಂದಿಗೆ ಹಮ್ಮಿಕೊಳ್ಳಲಾಗುತ್ತಿರುವ ಹಕ್ಕೋತ್ತಾಯದ ಪಾದಯಾತ್ರೆಯ ಕುರಿತು ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಶಾಸಕರಿಗೆ ಸಚಿವ ಸ್ಥಾನ ನೀಡುವ ಅಗತ್ಯತೆ, ಕ್ಷೇತ್ರದ ಅಭಿವೃದ್ಧಿ ಹಾಗೂ ಪಕ್ಷ ಸಂಘಟನೆಯಲ್ಲಿ ಅವರ ಕೊಡುಗೆ ಕುರಿತು ಮುಖಂಡರು ಹಾಗೂ ಕಾರ್ಯಕರ್ತರು ಚರ್ಚಿಸಿದರು. ಕಾಶಪ್ಪನವರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರ ಗಮನ ಸೆಳೆಯುವ ಉದ್ದೇಶದಿಂದ ಪಾದಯಾತ್ರೆಯನ್ನು ಯಶಸ್ವಿಗೊಳಿಸುವ ಕುರಿತು ರೂಪುರೇಷೆ ಸಿದ್ಧಪಡಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಮುಖಂಡರು, ಹುನಗುಂದ ಕ್ಷೇತ್ರದ ಜನರ ಆಶಯದಂತೆ ಹಾಗೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಈ ಹೋರಾಟ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಕರೆ ನೀಡಲಾಯಿತು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಹುನಗುಂದ ಕ್ಷೇತ್ರಕ್ಕೆ ಸೂಕ್ತ ಪ್ರತಿನಿಧಿತ್ವ ದೊರೆಯಬೇಕು ಎಂಬುದು ಸ್ಥಳೀಯ ಕಾಂಗ್ರೆಸ್ ಮುಖಂಡರ ಪ್ರಮುಖ ಬೇಡಿಕೆಯಾಗಿದೆ. ಪಾದಯಾತ್ರೆಯ ಮೂಲಕ ಪಕ್ಷದ ವರಿಷ್ಠರಿಗೆ ಮನವಿ ಸಲ್ಲಿಸಿ, ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಲಾಗುವುದು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande