
ಬಾಗಲಕೋಟೆ, 17 ಜೂನ್ (ಹಿ.ಸ.) :
ಆಂಕರ್ : ಹಿರಿಯ ರಾಜಕಾರಣಿ ಹಾಗೂ ಅನುಭವಿ ನಾಯಕ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಾಗಲಕೋಟೆ ನಗರ ಕಾಂಗ್ರೆಸ್ ಮುಖಂಡ ರಮೇಶ ಬದ್ನೂರ ಒತ್ತಾಯಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿರುವ ಎಚ್.ಕೆ. ಪಾಟೀಲ ಅವರು ಆಡಳಿತ ಅನುಭವ, ಜನಪರ ಚಿಂತನೆ ಹಾಗೂ ಸಂಘಟನಾ ಸಾಮರ್ಥ್ಯ ಹೊಂದಿರುವ ನಾಯಕರು. ಅವರಂತಹ ಅನುಭವಿಗಳ ಸೇವೆಯನ್ನು ಸರ್ಕಾರ ಮತ್ತಷ್ಟು ಬಳಸಿಕೊಳ್ಳಬೇಕಿದೆ ಎಂದು ರಮೇಶ ಬದ್ನೂರ ಅಭಿಪ್ರಾಯಪಟ್ಟರು.
ಎಚ್.ಕೆ. ಪಾಟೀಲ ಅವರು ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಹೊಂದಿದ್ದಾರೆ. ರಾಜ್ಯದ ಅಭಿವೃದ್ಧಿ ಹಾಗೂ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ಸೂಕ್ತ ನಿರ್ಧಾರವಾಗಲಿದೆ ಎಂದು ಹೇಳಿದರು.
ಪಕ್ಷದ ಹಿತದೃಷ್ಟಿಯಿಂದಲೂ ಹಾಗೂ ಸಾರ್ವಜನಿಕ ಸೇವೆಯ ದೃಷ್ಟಿಯಿಂದಲೂ ಎಚ್.ಕೆ. ಪಾಟೀಲ ಅವರ ಅನುಭವ ಅಗತ್ಯವಾಗಿದೆ. ಸರ್ಕಾರವು ಅವರ ಸಾಮರ್ಥ್ಯವನ್ನು ಪರಿಗಣಿಸಿ ಸೂಕ್ತ ಜವಾಬ್ದಾರಿ ನೀಡಬೇಕು ಎಂದು ರಮೇಶ ಬದ್ನೂರ ಆಗ್ರಹಿಸಿದರು.
ಈ ಕುರಿತು ಪಕ್ಷದ ವರಿಷ್ಠರು ಗಮನ ಹರಿಸಿ, ಹಿರಿಯ ನಾಯಕರಿಗೆ ಸೂಕ್ತ ಸ್ಥಾನಮಾನ ನೀಡುವ ಮೂಲಕ ಕಾರ್ಯಕರ್ತರು ಹಾಗೂ ಜನರ ನಿರೀಕ್ಷೆಗಳನ್ನು ಈಡೇರಿಸಬೇಕು ಎಂದು ಅವರು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande