ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ವಿಜಯಪುರದಿಂದ ಬೃಹತ್ ಕಾರ್ಯಕರ್ತರ ಪಡೆ
ವಿಜಯಪುರ, 17 ಜೂನ್ (ಹಿ.ಸ.) : ಆಂಕರ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಬಿ.ಕೆ. ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ವಿಜಯಪುರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವ ಕುರಿತು ಜಿಲ್
Sabhe


ವಿಜಯಪುರ, 17 ಜೂನ್ (ಹಿ.ಸ.) :

ಆಂಕರ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಬಿ.ಕೆ. ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ವಿಜಯಪುರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವ ಕುರಿತು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್. ಲೋಣಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಸಮಾರಂಭಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಕರೆದುಕೊಂಡು ಹೋಗುವ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಕಾರ್ಯಕರ್ತರ ಪ್ರಯಾಣ ವ್ಯವಸ್ಥೆ, ಸಂಘಟನಾ ಸಿದ್ಧತೆ ಹಾಗೂ ಸಮಾರಂಭದ ಯಶಸ್ವಿ ಪಾಲ್ಗೊಳ್ಳುವಿಕೆಯ ಕುರಿತು ಮುಖಂಡರಿಂದ ಸಲಹೆಗಳನ್ನು ಪಡೆಯಲಾಯಿತು.

ಸಭೆಯಲ್ಲಿ ರಾಜ್ಯದಲ್ಲಿ ಜಾರಿಯಲ್ಲಿರುವ ಎಸ್.ಆರ್.ಐ. (SRI) ಕಾರ್ಯಕ್ರಮದ ಕುರಿತು ಕೂಡ ಚರ್ಚೆ ನಡೆಯಿತು. ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಕಾರ್ಯಕ್ರಮದ ಅನುಷ್ಠಾನ ಹಾಗೂ ಸ್ಥಳೀಯ ಮಟ್ಟದ ಮಾಹಿತಿಯನ್ನು ಪಡೆದು, ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ಹಲವು ಬ್ಲಾಕ್ ಅಧ್ಯಕ್ಷರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಮಹ್ಮದರಫೀಕ ಟಪಾಲ, ಗಂಗಾಧರ ಸಂಬಣ್ಣಿ, ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ್ ಬಕ್ಷಿ, ಜಲನಗರ ಬ್ಲಾಕ್ ಅಧ್ಯಕ್ಷೆ ಆರತಿ ಶಾಹಪೂರ, ಎಸ್.ಎಂ. ಪಾಟೀಲ (ಗಣಿಯಾರ), ಆಫ್ತಾಬ್ ಕಾದ್ರಿ ಇನಾಮದಾರ ಸೇರಿದಂತೆ ಹಲವು ನಾಯಕರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ಸುಭಾಷ ಛಾಯಾಗೋಳ, ಮಹಾದೇವಿ ಗೋಕಾಕ, ಐ.ಎಂ. ಇಂಡಿಕರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಮೀಜಾ ನದಾಫ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಭೆಯಲ್ಲಿ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಬಿ.ಕೆ. ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭವನ್ನು ಯಶಸ್ವಿಗೊಳಿಸಲು ವಿಜಯಪುರ ಜಿಲ್ಲೆಯಿಂದ ಸಂಘಟಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande