ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ; ಏಳು ಮಂದಿ ದುರ್ಮರಣ
ಶಿಮ್ಲಾ, 18 ಜೂನ್ (ಹಿ.ಸ.) : ಆ್ಯಂಕರ್ : ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಗ್ರಾಮದ ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತರಲ್ಲಿ ಮೂವರು ಸಹೋದರರು, ದಂಪತಿ ಸೇರಿದಂತೆ ನಾಲ್ವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಚುರಾಹ
ಅಪಘಾತ ಸ್ಥಳ


ಶಿಮ್ಲಾ, 18 ಜೂನ್ (ಹಿ.ಸ.) :

ಆ್ಯಂಕರ್ : ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಗ್ರಾಮದ ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತರಲ್ಲಿ ಮೂವರು ಸಹೋದರರು, ದಂಪತಿ ಸೇರಿದಂತೆ ನಾಲ್ವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ.

ಚುರಾಹ ವಿಧಾನ ಸಭಾ ಕ್ಷೇತ್ರದ ಪುನಕರಿ–ಮಸರೂಂಡ್ ಮಾರ್ಗದ ಮಾನಿ ಜೀರೊ ಸಮೀಪ ಬುಧವಾರ ತಡರಾತ್ರಿ ಈ ದುರಂತ ಸಂಭವಿಸಿದೆ. ಬೊಲೆರೊ ವಾಹನ ನಿಯಂತ್ರಣ ತಪ್ಪಿ ಸುಮಾರು 500 ಮೀಟರ್ ಆಳದ ಕಂದಕಕ್ಕೆ ಉರುಳಿದ್ದು, ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ವಾಹನದಲ್ಲಿದ್ದ ಎಲ್ಲಾ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಚುನಿ ಲಾಲ್ (65), ದೇವಿ ಲಾಲ್ (62), ಮೋತಿ ರಾಮ್ (50), ಬಬ್ಲಿ ದೇವಿ (45), ಅನಿತಾ ಕುಮಾರಿ (20), ಕುಂತಾ ದೇವಿ (53) ಹಾಗೂ ಮನೋಹರ್ ಲಾಲ್ (34) ಎಂದು ಗುರುತಿಸಲಾಗಿದೆ. ಇವರಲ್ಲಿ ಚುನಿ ಲಾಲ್, ದೇವಿ ಲಾಲ್ ಹಾಗೂ ಮೋತಿ ರಾಮ್ ಸಹೋದರರಾಗಿದ್ದರು.

ಮಾಹಿತಿಯ ಪ್ರಕಾರ, ಪಂಚಾಯತ್ ಕುಠೇಡ್ ವ್ಯಾಪ್ತಿಯ ಮಹಲ್ ಗ್ರಾಮದ ನಿವಾಸಿಗಳಾದ ಇವರು ಕಾಕಡೋಥಾ ಗ್ರಾಮದಲ್ಲಿ ನಡೆದ ಮುಂಡನ ಸಂಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಡರಾತ್ರಿ ತಮ್ಮ ಊರಿಗೆ ಮರಳುತ್ತಿದ್ದರು. ಇದೇ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ರಕ್ಷಣಾ ಕಾರ್ಯ ಆರಂಭಿಸಿದರು. ಕತ್ತಲೆ ಹಾಗೂ ದುರ್ಗಮ ಪ್ರದೇಶವಾಗಿದ್ದರಿಂದ ಕಾರ್ಯಾಚರಣೆ ಸವಾಲಿನದ್ದಾಗಿತ್ತು. ಬಳಿಕ ಪೊಲೀಸರು ಮತ್ತು ಸ್ಥಳೀಯರು ಸೇರಿ ಮೃತದೇಹಗಳನ್ನು ಹೊರತೆಗೆದರು.

ಚಂಬಾ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಜಯ್ ಸಕ್ಲಾನಿ ಘಟನೆ ದೃಢಪಡಿಸಿದ್ದು, ಮೃತರಲ್ಲಿ ಹೆಚ್ಚಿನವರು ಒಂದೇ ಕುಟುಂಬದ ಸದಸ್ಯರಾಗಿದ್ದಾರೆ ಎಂದು ತಿಳಿಸಿದ್ದಾರೆ. ಎಲ್ಲ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಂಡಿತ್ ಜವಾಹರಲಾಲ್ ನೆಹರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ವಾಹನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಆದರೆ, ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ. ಅಪಘಾತ ಸಂಭವಿಸಿದ ಸ್ಥಳದಲ್ಲಿ ಸಮರ್ಪಕ ಕ್ರ್ಯಾಶ್ ಬ್ಯಾರಿಯರ್ಗಳ ಕೊರತೆಯೂ ದುರಂತದ ತೀವ್ರತೆಗೆ ಕಾರಣವಾಗಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande