ಕನಕಗಿರಿಯಲ್ಲಿ ಮಕ್ಕಳ ಹಕ್ಕುಗಳು, ಕಾನೂನುಗಳು ಮತ್ತು ಸುರಕ್ಷತೆ ಜಾಗೃತಿ
ಕೊಪ್ಪಳ, 18 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕನಕಗಿರಿ ತಾಲೂಕು ಮತ್ತು ಪಟ್ಟಣ ಪಂಚಾಯತ್ಗಳ ಸಂಯುಕ್ತಾಶ್ರಯದಲ್ಲಿ ಮ
Awareness of children's rights, laws and safety in Kanakagiri


ಕೊಪ್ಪಳ, 18 ಜೂನ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕನಕಗಿರಿ ತಾಲೂಕು ಮತ್ತು ಪಟ್ಟಣ ಪಂಚಾಯತ್ಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳು, ಕಾನೂನುಗಳು ಹಾಗೂ ಮಕ್ಕಳ ಸುರಕ್ಷತೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕನಕಗಿರಿ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಸಿಂಧು ಅಂಗಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, ಸಾಮಾಜಿಕ ಮಾಧ್ಯಮಗಳ ಪ್ರಭಾವದಿಂದ ಪ್ರೀತಿ-ಪ್ರೇಮದ ಹೆಸರಿನಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ತಿಳಿದೋ ತಿಳಿಯದೆಯೋ ಪೋಕ್ಸೋ ಕಾಯ್ದೆಯಡಿ ಪ್ರಕರಣಗಳಲ್ಲಿ ಸಿಲುಕುತ್ತಿರುವುದು ಆತಂಕಕಾರಿ ಬೆಳವಣಿಗೆಯಗಿದೆ. ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆ ಮಾಡಿಸುವವರು, ಅದರಲ್ಲಿ ಭಾಗವಹಿಸುವವರು ಹಾಗೂ ಪೋತ್ಸಾಹಿಸುವವರು ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಜೈಲು ಶಿಕ್ಷೆಗೆ ಗುರಿಯಾಗುತ್ತಿರುವ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿವೆ ಎಂದು ಅವರು ತಿಳಿಸಿದರು.

ಪೋಕ್ಸೋ ಕಾಯ್ದೆ-2012 (ತಿದ್ದುಪಡಿ-2019) ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟಲು ಪ್ರಮುಖ ಕಾನೂನಾಗಿದ್ದು, ಶಾಬ್ದಿಕ, ಆಂಗಿಕ, ಭಾಷಿಕ ಅಥವಾ ಲಿಖಿತ ರೂಪದಲ್ಲಿ ಮಕ್ಕಳ ಘನತೆಗೆ ಧಕ್ಕೆ ತಂದರೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ. ಇಂತಹ ಕೃತ್ಯಗಳಿಗೆ ಪೆÇ್ರೀತ್ಸಾಹ ನೀಡಿದವರಿಗೂ ಸಮಾನ ಶಿಕ್ಷೆ ಅನ್ವಯವಾಗುತ್ತದೆ ಎಂದು ಎಚ್ಚರಿಸಿದರು.

ಕನಕಗಿರಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ವಿ.ನಾರಾಯಣ ಅವರು ಮಾತನಾಡಿ, ಪರಿತ್ಯಕ್ತ, ಬೀದಿಬದಿ, ಬಾಲಕಾರ್ಮಿಕ, ಬಾಲ್ಯವಿವಾಹ ಅಥವಾ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳನ್ನು ಸಾರ್ವಜನಿಕರು ಮಕ್ಕಳ ಕಲ್ಯಾಣ ಸಮಿತಿ ಅಥವಾ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಮಕ್ಕಳ ರಕ್ಷಣೆಗೆ ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಬಾಲಮಂದಿರಗಳು ಹಾಗೂ ವಿಶೇಷ ದತ್ತು ಸೇವಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ (ಸಾಂಸ್ಥಿಕ) ರವಿಕುಮಾರ ಪವಾರ ಅವರು ಮಾತನಾಡಿ, 2018ರ ಮಾರ್ಚ್ 3ರ ನಂತರ ನಡೆದ ಬಾಲ್ಯವಿವಾಹಗಳು ಅಸಿಂಧುವಾಗಿದ್ದು, ಅಪ್ರಾಪ್ತ ಪತ್ನಿಯೊಂದಿಗಿನ ಲೈಂಗಿಕ ಸಂಪರ್ಕವನ್ನು ಅತ್ಯಾಚಾರ ಎಂದು ಪರಿಗಣಿಸಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ 20 ವರ್ಷಗಳಿಂದ ಜೀವಾವಧಿ ಶಿಕ್ಷೆಯವರೆಗೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಾದ್ರಿಗಳು ಹಾಗೂ ವಧು-ವರರ ಪಾಲಕರು ಸೇರಿದಂತೆ ಹಲವರ ವಿರುದ್ಧ 73ಕ್ಕೂ ಹೆಚ್ಚು ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿದ್ದು, 10 ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನಕಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರಿ ಉಪಪ್ರಾಚಾರ್ಯ ಅಮರೇಶ ದೇವರಾಳ ವಹಿಸಿದ್ದರು.

ಗಂಗಾವತಿಯ ಶಿಕ್ಷಣ ಸಂಯೋಜಕರಾದ ಶ್ರೀಕಾಂತ ಗುಡದನವರು, ಕರ್ನಾಟಕ ಪಬ್ಲಿಕ್ ಸ್ಕೂಲ್ ಮುಖ್ಯೋಪಾಧ್ಯಾಯರಾದ ದೊಡ್ಡಬಸವನಗೌಡ ಹಾಗೂ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಜಯಲಕ್ಷ್ಮೀ ಹಿರೇಮಠ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande