ಬಲೋಕಾಯುಕ್ತ ಕಚೇರಿ ಎದುರು ದಲಿತ ಸಂಘಟನೆಗಳ ಪ್ರತಿಭಟನೆಗೆ ಕಡಿವಾಣ, ನಿರ್ಬಂಧ ಜಾರಿ
ಬಾಗಲಕೋಟೆ, 18 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸಂಘಟನೆಗಳು ನವನಗರದಲ್ಲಿರುವ ಲೋಕಾಯುಕ್ತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ಕ
ಭದ್ರತೆ


ಬಾಗಲಕೋಟೆ, 18 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸಂಘಟನೆಗಳು ನವನಗರದಲ್ಲಿರುವ ಲೋಕಾಯುಕ್ತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಂಡಿದೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್) ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರ ಅನ್ವಯ ಲೋಕಾಯುಕ್ತ ಕಚೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಂಪು ಸೇರುವುದು, ಪ್ರತಿಭಟನೆ ನಡೆಸುವುದು ಸೇರಿದಂತೆ ಹಲವು ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

ನವನಗರ ಲೋಕಾಯುಕ್ತ ಕಚೇರಿ ಆವರಣದ ಸುತ್ತಮುತ್ತ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜನೆಗೊಂಡು ಪರಿಸ್ಥಿತಿಯನ್ನು ನಿಗಾ ವಹಿಸುತ್ತಿದ್ದಾರೆ.

ಬಿಟಿಡಿಎ ಪ್ರಕರಣದ ಕುರಿತು ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಕ್ರಮ ವಹಿಸಲಾಗಿದೆ.

ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಮುಂದುವರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande