ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಕುರಿತು ಸಚಿವ ಕೃಷ್ಣ ಬೈರೇಗೌಡ ಸಭೆ
ಬೆಂಗಳೂರು, 18 ಜೂನ್ (ಹಿ.ಸ.) : ಆ್ಯಂಕರ್ : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ವತಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಕಾರ್ಯಗಳು ಹಾಗೂ ನಗರ ಸ್ವಚ್ಛತೆ ಸುಧಾರಣೆಗೆ ಸಂಬಂಧಿಸಿದ ಕ್ರಮಗಳ ಕುರಿತು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ
Meeting


ಬೆಂಗಳೂರು, 18 ಜೂನ್ (ಹಿ.ಸ.) :

ಆ್ಯಂಕರ್ : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ವತಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಕಾರ್ಯಗಳು ಹಾಗೂ ನಗರ ಸ್ವಚ್ಛತೆ ಸುಧಾರಣೆಗೆ ಸಂಬಂಧಿಸಿದ ಕ್ರಮಗಳ ಕುರಿತು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಸಭೆಯಲ್ಲಿ ನಗರದ ಘನತ್ಯಾಜ್ಯ ನಿರ್ವಹಣೆ, ಕಸ ಸಂಗ್ರಹಣೆ ಮತ್ತು ವಿಲೇವಾರಿ ವ್ಯವಸ್ಥೆ, ಸ್ವಚ್ಛತಾ ಕಾರ್ಯಗಳ ಪರಿಣಾಮಕಾರಿತ್ವ ಹಾಗೂ ಸಾರ್ವಜನಿಕ ಸೇವೆಗಳ ಗುಣಮಟ್ಟವನ್ನು ಇನ್ನಷ್ಟು ಉತ್ತಮಗೊಳಿಸುವ ಕುರಿತು ಸಮಗ್ರ ಚರ್ಚೆ ನಡೆಯಿತು. ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಯೋಜನೆಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ಜಿ. ಜಗದೀಶ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ, ಸಿಒಒ ರಮಾಮಣಿ, ಸಿಎಫ್ಒ ರಾಜು, ಸಿಜಿಎಂ ರಾಜೇಶ್ ಸೇರಿದಂತೆ ಡಿಜಿಎಂ, ಎಜಿಎಂ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande