ಜೂ.29 ರಂದು ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸಭೆ
ಬಳ್ಳಾರಿ, 18 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸಮಿತಿ ಸಭೆಯನ್ನು ಜೂನ್ 29 ರಂದು ಮಧ್ಯಾಹ್ನ 03.30 ಗಂಟೆಗೆ ನಗರದ ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣದ “ಸಿ” ಬ್ಲಾಕ್ ನ ಮೊದಲ ಮಹಡಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ
ಜೂ.29 ರಂದು ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸಭೆ


ಬಳ್ಳಾರಿ, 18 ಜೂನ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸಮಿತಿ ಸಭೆಯನ್ನು ಜೂನ್ 29 ರಂದು ಮಧ್ಯಾಹ್ನ 03.30 ಗಂಟೆಗೆ ನಗರದ ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣದ “ಸಿ” ಬ್ಲಾಕ್ ನ ಮೊದಲ ಮಹಡಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ತಿಳಿಸಿದ್ದಾರೆ.

ಸರ್ಕಾರವು ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರನ್ನು ಈ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಪೊಲೀಸ್ ಇಲಾಖೆಯ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ವಿರುದ್ಧ ಸಾರ್ವಜನಿಕರಲ್ಲಿ ಏನಾದರೂ ದೂರುಗಳಿದ್ದಲ್ಲಿ, ಸಭೆಗೆ ಖುದ್ದಾಗಿ ಆಗಮಿಸಿ, ಪ್ರಾಧಿಕಾರದ ಸಮಿತಿಯ ಮುಂದೆ ತಮ್ಮ ದೂರುಗಳನ್ನು ಅಧಿಕೃತವಾಗಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande