ಹುಲ್ಲೂರ ಪಿಕೆಪಿಎಸ್ ಅಧ್ಯಕ್ಷರಾಗಿ ಹಣಮಂತ ಮೇಟಿ, ಉಪಾಧ್ಯಕ್ಷರಾಗಿ ಸಂತೋಷ ಚವ್ಹಾಣ ಅವಿರೋಧ ಆಯ್ಕೆ
ವಿಜಯಪುರ, 18 ಜೂನ್ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲ್ಲೂರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ (ಪಿಕೆಪಿಎಸ್) ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಿತು. ಸಂಘದ ಅಧ್ಯಕ್ಷರಾಗಿ ಹಣಮಂತ ಬೀರಪ್ಪ ಮೇಟಿ
ಆಯ್ಕೆ


ವಿಜಯಪುರ, 18 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ

ಮುದ್ದೇಬಿಹಾಳ ತಾಲೂಕಿನ ಹುಲ್ಲೂರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ (ಪಿಕೆಪಿಎಸ್) ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಿತು.

ಸಂಘದ ಅಧ್ಯಕ್ಷರಾಗಿ ಹಣಮಂತ ಬೀರಪ್ಪ ಮೇಟಿ ಹಾಗೂ ಉಪಾಧ್ಯಕ್ಷರಾಗಿ ಸಂತೋಷ ಸೋಮಸಿಂಗ್ ಚವ್ಹಾಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಜಯಪುರ ಸಹಕಾರಿ ಸಂಘಗಳ ನಿರೀಕ್ಷಕರು ಹಾಗೂ ಚುನಾವಣಾಧಿಕಾರಿ ವಿರೇಶ ಬಳಿಗಾರ ಅವರು ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಅಶೋಕ ಚವ್ಹಾಣ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.bನೂತನ ಅಧ್ಯಕ್ಷ ಹಣಮಂತ ಮೇಟಿ ಮಾತನಾಡಿ, ೯೯ ವರ್ಷಗಳ ಇತಿಹಾಸ ಹೊಂದಿರುವ ಪ್ರತಿಷ್ಠಿತ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿರುವ ಹಿರಿಯರು ಹಾಗೂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದರ ಜೊತೆಗೆ ರೈತರ ಹಿತದೃಷ್ಟಿಯಿಂದ ತೊಗರಿ ಖರೀದಿ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಂಘದ ಮಾಜಿ ಅಧ್ಯಕ್ಷ ಹಾಗೂ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಮುತ್ತಣ್ಣ ಹುಗಿ ಮಾತನಾಡಿ, ಸಹಕಾರಿ ಸಂಘದ ಕಾರ್ಯಚಟುವಟಿಕೆಗಳು ಯಾವುದೇ ರಾಜಕೀಯ ಭೇದಭಾವವಿಲ್ಲದೆ ರೈತರ ಅನುಕೂಲಕ್ಕಾಗಿ ನಡೆಯಬೇಕು ಎಂದು ಸಲಹೆ ನೀಡಿದರು. ಸಂಘದ ವತಿಯಿಂದ ರೈತರಿಗೆ ₹75 ಸಾವಿರದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರೆಯುತ್ತಿದ್ದು, ಗ್ರಾಮಸ್ಥರು ಹೆಚ್ಚಿನ ಪ್ರಮಾಣದಲ್ಲಿ ಠೇವಣಿ ಇಡುವ ಮೂಲಕ ಸಂಘದ ಆರ್ಥಿಕ ಬಲವರ್ಧನೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ. ಬಿರಾದಾರ ಹಾಗೂ ಮಾಜಿ ಅಧ್ಯಕ್ಷ ಸುರೇಶ ಹಳಿಮನಿ ಮಾತನಾಡಿ, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆಯು ಸಂಘದ ಸಮಯ ಹಾಗೂ ಆರ್ಥಿಕ ಸಂಪನ್ಮೂಲಗಳ ಉಳಿತಾಯಕ್ಕೆ ಸಹಕಾರಿಯಾಗಲಿದೆ. ಸದಸ್ಯರ ಒಗ್ಗಟ್ಟಿನಿಂದ ಸಂಘವು ಮತ್ತಷ್ಟು ಪ್ರಗತಿ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಾದ ಭೀಮನಗೌಡ ಬಿರಾದಾರ, ಮಹಾಂತೇಶ ಓಲೇಕಾರ, ಮೇಗಪ್ಪ ಲಮಾಣಿ, ಮುದ್ದಕಪ್ಪ ಬಿರಾದಾರ, ಉಮೇಶ್ ಲಮಾಣಿ, ಬಸಪ್ಪ ನಾಯ್ಕೋಡಿ, ಸುರೇಶ ಹಳಿಮನಿ, ಗೌರಮ್ಮ ಹಿರೇಮಠ, ಅಕ್ಷತಾ ಕೊಡಗಾನೂರ, ಮಾಜಿ ಜಿಪಂ ಸದಸ್ಯ ಬಿ.ಎಸ್. ಶಿರೋಳ, ವಿನೋದ ಓಲೇಕಾರ, ಬಾಪುಗೌಡ ಬೆನ್ನೂರ, ಮಹಾದೇವ ಚೆನ್ನಿ, ಸಾಬಣ್ಣ ಬಿರಾದಾರ, ಬೆಳ್ಳೆಪ್ಪ ಹುಗಾರ ಸೇರಿದಂತೆ ಸಂಘದ ಸದಸ್ಯರು, ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande