ವಿದ್ಯುತ್ ನಿಗಮಗಳ ಖಾಸಗೀಕರಣ ವಿರೋಧಿಸಿ ಕರವೇ ಪ್ರತಿಭಟನೆ
ಬಾಗಲಕೋಟೆ, 18 ಜೂನ್ (ಹಿ.ಸ.) : ಆಂಕರ್ : ವಿದ್ಯುತ್ ನಿಗಮಗಳ ಖಾಸಗೀಕರಣ ನೀತಿಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಬಾಗಲಕೋಟೆ ನಗರದಲ್ಲಿ ಪ್ರತಿಭಟನೆ ನಡೆಸಿದರು. ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿ ಸರ್ಕ
Protest


ಬಾಗಲಕೋಟೆ, 18 ಜೂನ್ (ಹಿ.ಸ.) :

ಆಂಕರ್ : ವಿದ್ಯುತ್ ನಿಗಮಗಳ ಖಾಸಗೀಕರಣ ನೀತಿಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಬಾಗಲಕೋಟೆ ನಗರದಲ್ಲಿ ಪ್ರತಿಭಟನೆ ನಡೆಸಿದರು. ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರಮುಖ ಸ್ಥಳದಲ್ಲಿ ಜಮಾಯಿಸಿದ ಕರವೇ ಕಾರ್ಯಕರ್ತರು, ವಿದ್ಯುತ್ ನಿಗಮಗಳು ಸಾರ್ವಜನಿಕ ಸೇವೆಯ ಪ್ರಮುಖ ಭಾಗವಾಗಿದ್ದು, ಅವುಗಳನ್ನು ಖಾಸಗಿ ಸಂಸ್ಥೆಗಳ ಕೈಗೆ ಒಪ್ಪಿಸುವುದರಿಂದ ಸಾಮಾನ್ಯ ಗ್ರಾಹಕರು, ರೈತರು ಹಾಗೂ ಬಡ ವರ್ಗದ ಜನರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ, ವಿದ್ಯುತ್ ನಿಗಮಗಳ ಖಾಸಗೀಕರಣದ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು. ಜನರ ಹಿತದೃಷ್ಟಿಯಿಂದ ವಿದ್ಯುತ್ ಕ್ಷೇತ್ರವನ್ನು ಸಾರ್ವಜನಿಕ ವಲಯದಲ್ಲಿಯೇ ಉಳಿಸಬೇಕು. ಇಲ್ಲವಾದರೆ ಕರವೇ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದಿಂದ ಉದ್ಯೋಗ ಭದ್ರತೆಗೂ ಧಕ್ಕೆಯಾಗುವ ಸಾಧ್ಯತೆ ಇದೆ. ಅಲ್ಲದೆ, ವಿದ್ಯುತ್ ದರ ಏರಿಕೆಯಾಗಿ ರೈತರು ಮತ್ತು ಸಾಮಾನ್ಯ ಜನರ ಮೇಲೆ ಆರ್ಥಿಕ ಹೊರೆ ಬೀಳಬಹುದು ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿದ್ಯುತ್ ನಿಗಮಗಳ ಖಾಸಗೀಕರಣದ ನೀತಿಯನ್ನು ಮರುಪರಿಶೀಲಿಸಿ, ಜನಪರ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರವೇ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಹಲವರು ಭಾಗವಹಿಸಿದ್ದರು. ನಂತರ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande