
ಬೆಂಗಳೂರು, 18 ಜೂನ್ (ಹಿ.ಸ.) :
ಆ್ಯಂಕರ್ : ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ತೆರವಾಗಿರುವ ಸ್ಥಾನಗಳ ಭರ್ತಿಗಾಗಿ ವಿಧಾನಸೌಧದಲ್ಲಿ ಗುರುವಾರ ನಡೆದ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ ಅವರು ಭಾಗವಹಿಸಿ ತಮ್ಮ ಮತ ಚಲಾಯಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅಶೋಕ್, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವ ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ಸ್ಪರ್ಧಿಸುತ್ತಿರುವ ಇಬ್ಬರೂ ಅಭ್ಯರ್ಥಿಗಳು ಭರ್ಜರಿ ವಿಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಜನಸಾಮಾನ್ಯರ ಆಶೋತ್ತರಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳನ್ನು ಬಿಜೆಪಿ ಅಭ್ಯರ್ಥಿಗಳು ಪರಿಣಾಮಕಾರಿಯಾಗಿ ಪ್ರತಿನಿಧಿಸಲಿ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.
ಜೊತೆಗೆ, ರಾಜ್ಯದ ಸರ್ವಾಂಗೀಣ ಪ್ರಗತಿಗೆ ತಮ್ಮ ಅಮೂಲ್ಯ ಕೊಡುಗೆ ನೀಡುವ ಮೂಲಕ ಜನರ ನಿರೀಕ್ಷೆಗಳನ್ನು ಈಡೇರಿಸಲಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.