ಮೂರು ದಿನಗಳ ನಂತರ ಮುಂಗಾರು ಚುರುಕು
ಬೆಂಗಳೂರು, 18 ಜೂನ್ (ಹಿ.ಸ.) : ಆ್ಯಂಕರ್ : ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ದುರ್ಬಲ ಮುಂಗಾರು ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧ
Alert


ಬೆಂಗಳೂರು, 18 ಜೂನ್ (ಹಿ.ಸ.) :

ಆ್ಯಂಕರ್ : ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ದುರ್ಬಲ ಮುಂಗಾರು ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಕೆಲ ಪ್ರದೇಶಗಳಲ್ಲಿ ಚದುರಿದ ಮಳೆಯಾಗಲಿದ್ದು, ವ್ಯಾಪಕ ಮಳೆಯ ಚಟುವಟಿಕೆ ತಾತ್ಕಾಲಿಕವಾಗಿ ಕುಂಠಿತವಾಗುವ ಸಾಧ್ಯತೆ ಇದೆ. ಆದರೆ, ಜೂನ್ 21ರಿಂದ ಮುಂಗಾರು ಚಟುವಟಿಕೆ ಮತ್ತೆ ಚುರುಕುಗೊಳ್ಳಲಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ದುರ್ಬಲ ಮುಂಗಾರು ಸ್ಥಿತಿ ಮುಂದುವರಿಯಲಿದ್ದರೂ, ಜೂನ್ 21ರಿಂದ ಮಳೆಯ ಚಟುವಟಿಕೆ ಪುನಶ್ಚೇತನಗೊಂಡು ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande