ಜೂ. 21ರಂದು ನೀಟ್ ಪರೀಕ್ಷೆ ; ನಿಷೇದಾಜ್ಞೆ ಜಾರಿ
ಕೊಪ್ಪಳ, 18 ಜೂನ್ (ಹಿ.ಸ.) : ಆ್ಯಂಕರ್ : ನೀಟ್ (ಯುಜಿ)-2026 ಪರೀಕ್ಷೆಯು ಜೂನ್ 21 ರಂದು ಮಧ್ಯಾಹ್ನ 2 ರಿಂದ ಸಂಜೆ 6.15 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ
ಜೂ. 21ರಂದು ನೀಟ್ ಪರೀಕ್ಷೆ ; ನಿಷೇದಾಜ್ಞೆ ಜಾರಿ


ಕೊಪ್ಪಳ, 18 ಜೂನ್ (ಹಿ.ಸ.) :

ಆ್ಯಂಕರ್ : ನೀಟ್ (ಯುಜಿ)-2026 ಪರೀಕ್ಷೆಯು ಜೂನ್ 21 ರಂದು ಮಧ್ಯಾಹ್ನ 2 ರಿಂದ ಸಂಜೆ 6.15 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ. ಸುರೇಶ್ ಬಿ. ಇಟ್ನಾಳ್ ಅವರು ಆದೇಶ ಹೊರಡಿಸಿದ್ದಾರೆ.

ನೀಟ್ (ಯುಜಿ)-2026 ಪರೀಕ್ಷೆಯು ಕೊಪ್ಪಳದ ಗವಿಮಠ ಕ್ಯಾಂಪಸ್ನ ಗವಿಸಿದ್ದೇಶ್ವರ ಪಿಯು- ಪದವಿ ಕಾಲೇಜು, ಬಿಇಒ ಕಚೇರಿಯ ಹಿಂದುಗಡೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಲಾರಜಂಗ್ ರಸ್ತೆಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ತಾಲೂಕು ಕ್ರೀಡಾಂಗಣದ ಹತ್ತಿರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಟಣಕನಕಲ್ ಗ್ರಾಮದಲ್ಲಿರುವ ಸರ್ಕಾರ ಆದರ್ಶ ವಿದ್ಯಾಲಯ, ತಳಕಲ್ ಗ್ರಾಮದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ದದೇಗಲ್ ಗ್ರಾಮದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಭಾಗ್ಯನಗರದ ಸರ್ಕಾರಿ ಪಿಯು ಕಾಲೇಜು, ಕೊಪ್ಪಳ ನಗರದ ಜವಾಹರ್ ರಸ್ತೆಯಲ್ಲಿರುವ ಬಾಲಕರ ಸರ್ಕಾರಿ ಪಿಯು ಕಾಲೇಜು, ಕುಷ್ಟಗಿ ರಸ್ತೆಯ ಬೆಲದಾರ ಕಾಲೋನಿಯಲ್ಲಿನ ಕಾಳಿದಾಸ ಪ್ರೌಢಶಾಲೆ, ಬಹದ್ದೂರಬಂಡಿ ಗ್ರಾಮದಲ್ಲಿನ ಪ್ರಧಾನಮಂತ್ರಿ ಶ್ರೀ ಕೇಂದ್ರೀಯ ವಿದ್ಯಾಲಯ ಸೇರಿ ಜಿಲ್ಲೆಯ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 21 ರಂದು ಮಧ್ಯಾಹ್ನ 2 ರಿಂದ ಸಂಜೆ 6.15 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಆವರಣವನ್ನು ನಿಬರ್ಂಧಿತ ಪ್ರದೇಶ ಎಂದು ಘೋಷಿಸಿ, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇದಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande