ನವೋದಯ ವಿದ್ಯಾಲಯ : 11ನೇ ತರಗತಿ ವಾಣಿಜ್ಯ ವಿಭಾಗದ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ, 18 ಜೂನ್ (ಹಿ.ಸ.) : ಆ್ಯಂಕರ್ : ಕುಕನೂರಿನಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನ 11ನೇ ತರಗತಿಯ ವಾಣಿಜ್ಯ ವಿಭಾಗದಲ್ಲಿ ಖಾಲಿ ಇರುವ 30 ಸೀಟುಗಳಿಗಾಗಿ ನೇರವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸುವವರು 10ನೇ ತರಗತಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅಭ್ಯ
ನವೋದಯ ವಿದ್ಯಾಲಯ : 11ನೇ ತರಗತಿ ವಾಣಿಜ್ಯ ವಿಭಾಗದ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ


ಕೊಪ್ಪಳ, 18 ಜೂನ್ (ಹಿ.ಸ.) :

ಆ್ಯಂಕರ್ : ಕುಕನೂರಿನಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನ 11ನೇ ತರಗತಿಯ ವಾಣಿಜ್ಯ ವಿಭಾಗದಲ್ಲಿ ಖಾಲಿ ಇರುವ 30 ಸೀಟುಗಳಿಗಾಗಿ ನೇರವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸುವವರು 10ನೇ ತರಗತಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅಭ್ಯಾಸ ಮಾಡಿ ಉತ್ತೀರ್ಣರಾಗಿರಬೇಕು. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಜವಾಹರ ನವೋದಯ ವಿದ್ಯಾಲಯ, ಕುಕನೂರು ಇಲ್ಲಿಂದ ಅರ್ಜಿಗಳನ್ನು ಪಡೆದುಕೊಂಡು, ನೇರವಾಗಿ ಜೂನ್ 25 ರೊಳಗಾಗಿ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ, ಅರ್ಹತೆ(ಮೆರಿಟ್)ನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande