ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ; ಅರ್ಜಿ ಆಹ್ವಾನ
ಕೊಪ್ಪಳ, 18 ಜೂನ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂ
ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ; ಅರ್ಜಿ ಆಹ್ವಾನ


ಕೊಪ್ಪಳ, 18 ಜೂನ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೇರಿದಂತೆ ವಿವಿಧ ಶೈಕ್ಷಣಿಕ ಸೌಲಭ್ಯಗಳು ಲಭ್ಯವಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.

ಅರ್ಹ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ ಹಾಗೂ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಯೋಜನೆಯಡಿ ಊಟ ಹಾಗೂ ವಸತಿ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ಎಸ್ಪಿ) ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಯೋಜನೆಗಳ ವಿವರ, ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಇತರೆ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://ssp.postmatric.karnataka.gov.in/ ನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು ಅಥವಾ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 8050770004, ಇ-ಮೇಲ್ ï bcwdhelpline@gmail.com, ಎಸ್ಎಸ್ಪಿ ಸಹಾಯವಾಣಿ ಸಂಖ್ಯೆ 1902 ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಇ-ಮೇಲ್ postmatrichelp@karnataka.gov.in ಮೂಲಕ ಸಂಪರ್ಕಿಸಬಹುದು.

ಜಿಲ್ಲೆಯ ಅರ್ಹ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ, ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ಸರ್ಕಾರದ ಈ ಶೈಕ್ಷಣಿಕ ಸೌಲಭ್ಯಗಳ ಸದುಪಯೋಗ ಪಡೆಯುವಂತೆ ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande