
ಕೊಪ್ಪಳ, 19 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ವಿದ್ಯುತ್ ಗ್ರಾಹಕರ ಅಹವಾಲು ಸ್ವೀಕಾರ ಮತ್ತು ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ನಾಳೆ ಬೆಳಗ್ಗೆ 11 ಗಂಟೆಗೆ ಕೊಪ್ಪಳದ ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಸಂಬಂಧಿಸಿದ ವಿದ್ಯುತ್ ಗ್ರಾಹಕರು ಈ ಸಭೆಗೆ ಹಾಜರಾರುವಂತೆ ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್