ವಿದ್ಯುತ್ ಖಾಸಗಿಕರಣ ವಿರೋಧಿಸಿ ಮುಧೋಳದಲ್ಲಿ ರೈತರ ಬೃಹತ್ ಪ್ರತಿಭಟನೆ
ಬಾಗಲಕೋಟೆ, 19 ಜೂನ್ (ಹಿ.ಸ.) : ಆಂಕರ್ : ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಪ್ರಸ್ತಾವನೆ ವಿರೋಧಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳಬಾರದು ಎಂದು ಆಗ್ರಹಿಸಿ ನೂರಾರು
Protest


ಬಾಗಲಕೋಟೆ, 19 ಜೂನ್ (ಹಿ.ಸ.) :

ಆಂಕರ್ : ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಪ್ರಸ್ತಾವನೆ ವಿರೋಧಿಸಿ ಬಾಗಲಕೋಟೆ ಜಿಲ್ಲೆಯ

ಮುಧೋಳದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.

ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳಬಾರದು ಎಂದು ಆಗ್ರಹಿಸಿ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗಿ ಕೈಗಳಿಗೆ ಹೋದರೆ ಕೃಷಿ ವಲಯದ ಮೇಲೆ ಹೆಚ್ಚಿನ ಹೊರೆ ಬೀಳುವ ಸಾಧ್ಯತೆ ಇದೆ ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು, ಕೃಷಿ ಚಟುವಟಿಕೆಗಳಿಗೆ ಸಮರ್ಪಕ ಹಾಗೂ ಕಡಿಮೆ ದರದಲ್ಲಿ ವಿದ್ಯುತ್ ಪೂರೈಕೆ ಮುಂದುವರಿಸಬೇಕು. ರೈತರಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸಬಾರದು ಎಂದು ಒತ್ತಾಯಿಸಿದರು.

ವಿದ್ಯುತ್ ಖಾಸಗಿಕರಣದಿಂದ ಸಾಮಾನ್ಯ ಗ್ರಾಹಕರು, ರೈತರು ಹಾಗೂ ಸಣ್ಣ ವ್ಯಾಪಾರಿಗಳಿಗೆ ತೊಂದರೆ ಉಂಟಾಗಬಹುದು ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.

ಸರ್ಕಾರ ರೈತರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರತಿಭಟನಾ ಸ್ಥಳದಲ್ಲಿ ರೈತ ಮುಖಂಡರು ಮಾತನಾಡಿ, ವಿದ್ಯುತ್ ಎಂಬುದು ರೈತರ ಬದುಕಿನ ಪ್ರಮುಖ ಆಧಾರವಾಗಿದೆ. ಇದನ್ನು ಖಾಸಗೀಕರಣ ಮಾಡುವ ಬದಲು ಸರ್ಕಾರಿ ನಿಯಂತ್ರಣದಲ್ಲಿಯೇ ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.

ರೈತರ ಹಕ್ಕುಗಳು ಹಾಗೂ ಕೃಷಿ ಕ್ಷೇತ್ರದ ಭದ್ರತೆಗಾಗಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಮುಖಂಡರು ನೀಡಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ವಿದ್ಯುತ್ ಖಾಸಗೀಕರಣ ವಿರೋಧಿಸಿ ದೇಶದ ವಿವಿಧ ಭಾಗಗಳಲ್ಲಿ ರೈತ ಹಾಗೂ ಕಾರ್ಮಿಕ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮುಧೋಳದಲ್ಲಿಯೂ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದ

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande