
ಬಳ್ಳಾರಿ, 19 ಜೂನ್ (ಹಿ.ಸ.) :
ಆ್ಯಂಕರ್ : ‘ಆರೋಗ್ಯಕರ ವೃದ್ದಾಪ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜೂ.21 ರಂದು ಬೆಳಿಗ್ಗೆ 06 ಗಂಟೆಗೆ ನಗರದ ಎಸ್.ಜಿ. ಲಾ-ಕಾಲೇಜು ಆವರಣ (ಶೆಟ್ಟರ್ ಗುರುಶಾಂತಪ್ಪ ಲಾ ಕಾಲೇಜು ಮೈದಾನ)ದಲ್ಲಿ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಕ್ಷೇತ್ರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷ್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಣೇಕಲ್ ಮಹಾಂತೇಶ್ ಸೇರಿದಂತೆ ಇತರರು ಭಾಗವಹಿಸುವರು.
ಆಯುಷ್ ಇಲಾಖೆಯ ಆಯುಕ್ತ ಡಾ.ಸುನೀಲ್ ಪಂವಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಟಿ.ಫಣೀಂಧರ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್