ಸಿಕಲ್ ಸೆಲ್ ರೋಗ ನಿರ್ಮೂಲನೆಗೆ ಸರಕಾರ ಬದ್ಧ : ಜೆ.ಪಿ. ನಡ್ಡಾ
ನವದೆಹಲಿ, 19 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವ ಸಿಕಲ್ ಸೆಲ್ ಜಾಗೃತಿ ದಿನದ ಅಂಗವಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ದೇಶವನ್ನು ಸಿಕಲ್ ಸೆಲ್ ರೋಗಮುಕ್ತಗೊಳಿಸುವ ಸಂಕಲ್ಪವನ್ನು ಪುನರುಚ್ಚರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ರ
ಸಿಕ್ ಸೆಲ್


ನವದೆಹಲಿ, 19 ಜೂನ್ (ಹಿ.ಸ.) :

ಆ್ಯಂಕರ್ : ವಿಶ್ವ ಸಿಕಲ್ ಸೆಲ್ ಜಾಗೃತಿ ದಿನದ ಅಂಗವಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ದೇಶವನ್ನು ಸಿಕಲ್ ಸೆಲ್ ರೋಗಮುಕ್ತಗೊಳಿಸುವ ಸಂಕಲ್ಪವನ್ನು ಪುನರುಚ್ಚರಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ರಾಷ್ಟ್ರೀಯ ಸಿಕಲ್ ಸೆಲ್ ಅನೀಮಿಯಾ ನಿರ್ಮೂಲನಾ ಮಿಷನ್ ಅಡಿಯಲ್ಲಿ ದೇಶವು ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ತಿಳಿಸಿದ್ದಾರೆ.

ಇಲ್ಲಿಯವರೆಗೆ 7.19 ಕೋಟಿಗೂ ಹೆಚ್ಚು ಜನರ ತಪಾಸಣೆ ನಡೆಸಲಾಗಿದ್ದು, 20.26 ಲಕ್ಷಕ್ಕೂ ಹೆಚ್ಚು ಜನರನ್ನು ಸಿಕಲ್ ಸೆಲ್ ವಾಹಕರಾಗಿ ಗುರುತಿಸಲಾಗಿದೆ. ಜೊತೆಗೆ 2.46 ಲಕ್ಷ ಜನರಲ್ಲಿ ಸಿಕಲ್ ಸೆಲ್ ರೋಗ ಪತ್ತೆಯಾಗಿದ್ದು, 4.82 ಕೋಟಿ ಸಿಕಲ್ ಸೆಲ್ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಿಶೇಷವಾಗಿ ಬುಡಕಟ್ಟು ಸಮುದಾಯಗಳು ಹಾಗೂ ಇತರ ದುರ್ಬಲ ವರ್ಗಗಳಲ್ಲಿ ಆರಂಭಿಕ ಹಂತದಲ್ಲೇ ರೋಗ ಪತ್ತೆ, ಸಮಯೋಚಿತ ಚಿಕಿತ್ಸೆ, ಅನುವಂಶಿಕ ಸಲಹೆ ಮತ್ತು ಸಮಗ್ರ ಆರೋಗ್ಯ ಸೇವೆ ಒದಗಿಸಲು ಕೈಗೊಂಡಿರುವ ಸಾಮೂಹಿಕ ಪ್ರಯತ್ನಗಳ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ನಡ್ಡಾ ಹೇಳಿದ್ದಾರೆ.

ಸಿಕಲ್ ಸೆಲ್ ರೋಗದ ಕುರಿತು ಜಾಗೃತಿ ಹೆಚ್ಚಿಸುವುದು ಮತ್ತು ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. 2047ರೊಳಗೆ ಸಿಕಲ್ ಸೆಲ್ ರೋಗವನ್ನು ಸಾರ್ವಜನಿಕ ಆರೋಗ್ಯದ ಸವಾಲಾಗಿ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿ ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande