
ವಿಜಯಪುರ, 19 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ನಗರದ ಎಂ.ಬಿ. ಪಾಟೀಲ ಬಡಾವಣೆಯಲ್ಲಿ ಉದ್ಯಾನವನ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರಾದಿಕಾರದ ಅಧ್ಯಕ್ಷ ಡಾ ಗಂಗಾಧರ ಸಂಬನ್ನಿ ಸ್ಥಳ ಪರಿಶೀಲನೆ ನಡೆಸಿದರು. ಅವರು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪ್ರಸ್ತಾವಿತ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉದ್ಯಾನವನ ನಿರ್ಮಾಣಕ್ಕೆ ಅಗತ್ಯವಿರುವ ಮೂಲಸೌಕರ್ಯ, ಸಾರ್ವಜನಿಕರಿಗೆ ಅನುಕೂಲವಾಗುವ ಸೌಲಭ್ಯಗಳು, ಹಸಿರು ವಾತಾವರಣ ನಿರ್ಮಾಣ ಹಾಗೂ ಬಡಾವಣೆಯ ಸೌಂದರ್ಯೀಕರಣದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ನಗರದ ಬೆಳವಣಿಗೆಯೊಂದಿಗೆ ಸಾರ್ವಜನಿಕರಿಗೆ ಉತ್ತಮ ಆರೋಗ್ಯಕರ ವಾತಾವರಣ ಕಲ್ಪಿಸುವುದು ಅಗತ್ಯವಾಗಿದ್ದು, ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಲಾಯಿತು.
ಸ್ಥಳ ಪರಿಶೀಲನೆ ವೇಳೆ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದು, ಉದ್ಯಾನವನ ಅಭಿವೃದ್ಧಿಗೆ ಸಂಬಂಧಿಸಿದ ತಮ್ಮ ಅಭಿಪ್ರಾಯಗಳು ಹಾಗೂ ಅಗತ್ಯತೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಾರ್ವಜನಿಕರ ಬೇಡಿಕೆಗಳನ್ನು ಪರಿಗಣಿಸಿ ಶೀಘ್ರದಲ್ಲೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ತಿಳಿಸಲಾಯಿತು.
ಅಧಿಕಾರಿಗಳು ಸ್ಥಳದ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ, ಉದ್ಯಾನವನ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆ ರೂಪಿಸುವ ಕುರಿತು ಮಾಹಿತಿ ನೀಡಿದರು. ಉದ್ಯಾನವನ ನಿರ್ಮಾಣದಿಂದ ಬಡಾವಣೆಯ ನಿವಾಸಿಗಳಿಗೆ ವಾಯುವಿಹಾರ, ವಿಶ್ರಾಂತಿ ಹಾಗೂ ಮಕ್ಕಳಿಗೆ ಆಟದ ಸೌಲಭ್ಯಗಳು ದೊರೆಯಲಿದ್ದು, ನಗರದ ಪರಿಸರ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande