ಮೋದಿ ಸರ್ಕಾರದ 12 ವರ್ಷಗಳ ಸಾಧನೆಗಳ ಸಮಾವೇಶ ; ಚಾಂದಕವಠೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಕಲ್ಪ
ವಿಜಯಪುರ, 19 ಜೂನ್ (ಹಿ.ಸ.) : ಆಂಕರ್ : ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿಜಯಪುರ ಜಿಲ್ಲೆಯ ಸಿಂದಗಿ ಮಂಡಲದ ವತಿಯಿಂದ ಮತಕ್ಷೇತ್ರ ವ್ಯಾಪ್ತಿಯ ಚಾಂದಕವಠೆ ಗ್ರಾಮದ ಮರಡಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 12 ವರ್ಷಗಳ ಐತಿಹಾಸಿಕ ಸಾಧನೆಗಳನ್ನ
Bjp


ವಿಜಯಪುರ, 19 ಜೂನ್ (ಹಿ.ಸ.) :

ಆಂಕರ್ : ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿಜಯಪುರ ಜಿಲ್ಲೆಯ ಸಿಂದಗಿ ಮಂಡಲದ ವತಿಯಿಂದ ಮತಕ್ಷೇತ್ರ ವ್ಯಾಪ್ತಿಯ ಚಾಂದಕವಠೆ ಗ್ರಾಮದ ಮರಡಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 12 ವರ್ಷಗಳ ಐತಿಹಾಸಿಕ ಸಾಧನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸಾಧನಾ ಸಮಾವೇಶವನ್ನು ಆಯೋಜಿಸಲಾಯಿತು.

ಸಂಸದ ಹಾಗೂ ಬಿಜೆಪಿ ಹಿರಿಯ ನಾಯಕ ರಮೇಶ ಜಿಗಜಣಗಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂದಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಅವರು ಭಾಗವಹಿಸಿ, ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿದರು.

ಮೋದಿ ಸರ್ಕಾರದ ಸಾಧನೆಗಳು ಕೇವಲ ದೆಹಲಿಗೆ ಸೀಮಿತವಾಗಿಲ್ಲ. ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೂ ಸರ್ಕಾರದ ಯೋಜನೆಗಳ ಪ್ರಯೋಜನ ತಲುಪಿದೆ ಎಂದು ಅವರು ಹೇಳಿದರು.

ದೇಶದ ಬಡ ಜನರಿಗೆ ‘ಗರೀಬ್ ಕಲ್ಯಾಣ್ ಅನ್ನ ಯೋಜನೆ’ ಮೂಲಕ ಉಚಿತ ಆಹಾರ ಧಾನ್ಯ ವಿತರಣೆ, ಜಲ ಜೀವನ ಮಿಷನ್ ಮೂಲಕ ಮನೆ ಮನೆಗೆ ಕುಡಿಯುವ ನೀರಿನ ಸಂಪರ್ಕ, ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮೂಲಕ ನೇರ ಆರ್ಥಿಕ ನೆರವು ಸೇರಿದಂತೆ ಹಲವು ಯೋಜನೆಗಳು ಜನರ ಬದುಕಿನಲ್ಲಿ ಬದಲಾವಣೆ ತಂದಿವೆ ಎಂದು ತಿಳಿಸಿದರು.

ಬಡ ಕುಟುಂಬಗಳಿಗೆ ಆರೋಗ್ಯ ಭದ್ರತೆ ಒದಗಿಸುವ ಉದ್ದೇಶದಿಂದ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ₹5 ಲಕ್ಷದವರೆಗೆ ಉಚಿತ ವೈದ್ಯಕೀಯ ನೆರವು ನೀಡಲಾಗುತ್ತಿದೆ. ಸ್ವಚ್ಛ ಭಾರತ ಅಭಿಯಾನದ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ನಿರ್ಮಿಸಿ ಮಹಿಳೆಯರ ಗೌರವ ಮತ್ತು ಸುರಕ್ಷತೆಯನ್ನು ಕಾಪಾಡಲಾಗಿದೆ ಎಂದು ಹೇಳಿದರು.

2014ರಲ್ಲಿ ವಿಶ್ವ ಆರ್ಥಿಕತೆಯಲ್ಲಿ 11ನೇ ಸ್ಥಾನದಲ್ಲಿದ್ದ ಭಾರತ ಇಂದು 5ನೇ ಅತಿ ದೊಡ್ಡ ಆರ್ಥಿಕ ರಾಷ್ಟ್ರವಾಗಿ ಬೆಳೆದಿದೆ. ದೇಶದ ಭದ್ರತೆ, ಮೂಲಸೌಕರ್ಯ, ಆರ್ಥಿಕ ಅಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತ ಹೊಸ ಎತ್ತರ ತಲುಪಿದೆ ಎಂದು ಶೈಲಗೌಡ ಬಿರಾದಾರ ಹೇಳಿದರು.

“ಇಂದಿನ ಭಾರತ ಶತ್ರುಗಳಿಗೆ ಹೆದರುವ ಭಾರತವಲ್ಲ. ದೇಶದ ಭದ್ರತೆಗಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಬಲಿಷ್ಠ ಭಾರತವಾಗಿದೆ. ಜಮ್ಮು-ಕಾಶ್ಮೀರದ 370ನೇ ವಿಧಿ ರದ್ದುಪಡಿಸುವುದು ಹಾಗೂ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವು ಸರ್ಕಾರದ ಸಂಕಲ್ಪ ಮತ್ತು ಬದ್ಧತೆಯ ಪ್ರತೀಕವಾಗಿದೆ” ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತವು ದೇಶದ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಅಧ್ಯಾಯವಾಗಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪದೊಂದಿಗೆ ಪ್ರತಿಯೊಬ್ಬ ಕಾರ್ಯಕರ್ತರೂ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಸಿಂದಗಿ ಮಂಡಲದ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರತಿಯೊಂದು ಮನೆಗೂ, ಪ್ರತಿಯೊಬ್ಬ ಮತದಾರನಿಗೂ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಮುಂಬರುವ ದಿನಗಳಲ್ಲಿ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande