ಕ್ಷೇತ್ರ ಭೇಟಿಗೆ ವೇಗ ನೀಡಲು ಮುದ್ದೇಬಿಹಾಳ ತಾಲೂಕು ಪಂಚಾಯಿತಿಗೆ ನೂತನ ಬೊಲೆರೊ ವಾಹನ
ವಿಜಯಪುರ, 19 ಜೂನ್ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಪಂಚಾಯಿತಿ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಮುದ್ದೇಬಿಹಾಳ ತಾಲೂಕು ಪಂಚಾಯಿತಿಗೆ ನೂತನ ಬೊಲೆರೊ ವಾಹನ ಲಭ್ಯವಾಗಿದ್ದು, ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ಅಭಿವೃದ್ಧಿ ನಿ
Vahan


ವಿಜಯಪುರ, 19 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ

ಮುದ್ದೇಬಿಹಾಳ ತಾಲೂಕು ಪಂಚಾಯಿತಿ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಮುದ್ದೇಬಿಹಾಳ ತಾಲೂಕು ಪಂಚಾಯಿತಿಗೆ ನೂತನ ಬೊಲೆರೊ ವಾಹನ ಲಭ್ಯವಾಗಿದ್ದು, ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರು ವಾಹನಕ್ಕೆ ಚಾಲನೆ ನೀಡಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಅಧಿಕಾರಿಗಳ ಕ್ಷೇತ್ರ ಭೇಟಿಗಳು, ಗ್ರಾಮೀಣ ಪ್ರದೇಶಗಳ ಪರಿಶೀಲನೆ ಹಾಗೂ ವಿವಿಧ ಆಡಳಿತಾತ್ಮಕ ಕಾರ್ಯಗಳ ಸುಗಮ ನಿರ್ವಹಣೆಗೆ ಅನುಕೂಲವಾಗುವ ಉದ್ದೇಶದಿಂದ ಈ ವಾಹನವನ್ನು ಖರೀದಿಸಲಾಗಿದೆ.

ವಾಹನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಶಾಸಕ ಸಿ.ಎಸ್. ನಾಡಗೌಡ ಅವರು, ತಾಲೂಕು ಪಂಚಾಯಿತಿಗೆ ನೂತನ ವಾಹನ ದೊರೆತಿರುವುದು ಆಡಳಿತ ಕಾರ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಲಿದೆ ಎಂದು ಹೇಳಿದರು. ಅಧಿಕಾರಿಗಳು ಈ ವಾಹನದ ಸದುಪಯೋಗ ಪಡೆದುಕೊಂಡು ನಿರಂತರವಾಗಿ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಪರಿಹಾರ ಕಂಡುಕೊಳ್ಳುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು.

ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಯಾವುದೇ ಸಮಸ್ಯೆಗಳು ಬಾಕಿ ಉಳಿಯದಂತೆ ತ್ವರಿತ ಕ್ರಮ ಕೈಗೊಂಡು ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದು ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂಗನಗೌಡ ಬಿರಾದಾರ ಅವರು ನೂತನ ವಾಹನದ ಬಳಕೆ, ಕ್ಷೇತ್ರ ಕಾರ್ಯಗಳ ಯೋಜನೆ ಹಾಗೂ ಆಡಳಿತಾತ್ಮಕ ಚಟುವಟಿಕೆಗಳ ಕುರಿತು ಶಾಸಕರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿಷಯ ನಿರ್ವಾಹಕ ಆನಂದಗೌಡ ಬಿರಾದಾರ, ವಾಹನ ಚಾಲಕ ಮಂಜುನಾಥ ಗುಡಿಮನಿ ಹಾಗೂ ತಾಲೂಕು ಪಂಚಾಯಿತಿಯ ವಿವಿಧ ಸಿಬ್ಬಂದಿ ಉಪಸ್ಥಿತರಿದ್ದರು.

ನೂತನ ವಾಹನದ ಆಗಮನದಿಂದ ತಾಲೂಕು ಪಂಚಾಯಿತಿಯ ಕ್ಷೇತ್ರ ಕಾರ್ಯಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande