ಮಹನೀಯರ ಜಯಂತಿ ಪೂರ್ವಭಾವಿ ಸಭೆ
ಬಳ್ಳಾರಿ, 19 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತದಿಂದ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಹೇಳಿದ್ದಾರೆ. ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತು
Pre-birthday meeting of the greats


Pre-birthday meeting of the greats


ಬಳ್ಳಾರಿ, 19 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತದಿಂದ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಹೇಳಿದ್ದಾರೆ.

ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಕೇಂದ್ರದಲ್ಲಿ ಜೂ.27 ರಂದು ಕೆಂಪೇಗೌಡ ಜಯಂತಿ ಮತ್ತು ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ನಿರ್ಧಾರ ಕೈಗೊಳ್ಳಲಾಯಿತು.

ಇಬ್ಬರೂ ಮಹನೀಯರ ಜಯಂತಿಯನ್ನು ಸಾಂಸ್ಕøತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಆಯೋಜಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande