

ಬಳ್ಳಾರಿ, 19 ಜೂನ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ರದ್ದುಗೊಳಿಸಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಲು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ಸ್ನ ಜಿಲ್ಲಾ ಸಮಿತಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದೆ.
ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ಸ್ನ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗಡಿಗೆ ಚೆನ್ನಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಹಾಗೂ ಕೇಂಧ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್