ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ : ವಿನಯಕುಮಾರ ಪಾಟೀಲ
ವಿಜಯಪುರ, 19 ಜೂನ್ (ಹಿ.ಸ.) : ಆಂಕರ್ : 2026ರ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (Special Summary Revision) ಕಾರ್ಯಕ್ಕೆ ಸಾರ್ವಜನಿಕರು ಸಕ್ರಿಯವಾಗಿ ಸಹಕರಿಸುವಂತೆ ಮತದಾರರ ನೋಂದಣಾಧಿಕಾರಿ ವಿನಯಕುಮಾರ ಪಾಟೀಲ ಅವರು ಮನವಿ ಮಾಡಿದರು. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಾಲೂಕು ಕಚೇರಿಯಲ್ಲಿ ನ
Sabhe


ವಿಜಯಪುರ, 19 ಜೂನ್ (ಹಿ.ಸ.) :

ಆಂಕರ್ : 2026ರ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (Special Summary Revision) ಕಾರ್ಯಕ್ಕೆ ಸಾರ್ವಜನಿಕರು ಸಕ್ರಿಯವಾಗಿ ಸಹಕರಿಸುವಂತೆ ಮತದಾರರ ನೋಂದಣಾಧಿಕಾರಿ ವಿನಯಕುಮಾರ ಪಾಟೀಲ ಅವರು ಮನವಿ ಮಾಡಿದರು.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಮತದಾರರ ಪರಿಷ್ಕರಣೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತದಾರರ ಪಟ್ಟಿಯನ್ನು ದೋಷರಹಿತವಾಗಿ ಸಿದ್ಧಪಡಿಸುವ ಉದ್ದೇಶದಿಂದ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗಿದೆ. ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಹೊಸದಾಗಿ 18 ವರ್ಷ ಪೂರ್ಣಗೊಳಿಸಿದ ಯುವಕರು ಮತದಾರರಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ತೆಗೆದುಹಾಕುವುದು ಸೇರಿದಂತೆ ವಿವಿಧ ಸೇವೆಗಳಿಗೆ ನಿಗದಿತ ನಮೂನೆಗಳ ಮೂಲಕ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕರು ತಮ್ಮ ಕುಟುಂಬದ ಸದಸ್ಯರ ಮತದಾರರ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕು ಮಹತ್ವದ್ದಾಗಿದ್ದು, ಸರಿಯಾದ ಮತ್ತು ನವೀಕೃತ ಮತದಾರರ ಪಟ್ಟಿ ಚುನಾವಣಾ ಪ್ರಕ್ರಿಯೆಯ ಪ್ರಮುಖ ಭಾಗವಾಗಿದೆ. ಹೀಗಾಗಿ ಅಧಿಕಾರಿಗಳು, ಬಿಎಲ್ಒಗಳು ಹಾಗೂ ಸಾರ್ವಜನಿಕರು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು ಎಂದು ವಿನಯಕುಮಾರ ಪಾಟೀಲ ಹೇಳಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ ಕರೆಪ್ಪ ಎಸ್. ಬೆಳ್ಳಿ, ಶಿರಸ್ತೇದಾರ ಎಂ.ಎಂ. ಚಟ್ಟರಕಿ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande