

ಬಳ್ಳಾರಿ, 19 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ರೀಚ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ ‘ಮಕ್ಕಳ ಹಕ್ಕುಗಳ ರಕ್ಷಣೆ’ಯ ವಿಶೇಷ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಚಾಲನೆ ನೀಡಿದ್ದಾರೆ.
ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತ ಜಾಗೃತಿ ಫಲಕಗಳನ್ನು ಬಿಡುಗಡೆ ಮಾಡಿದ ಅವರು, ಬಾಲ್ಯ ವಿವಾಹ ತಡೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಯ ಉದ್ದೇಶದಿಂದ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಈ ವಿಶೇಷ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ಈ ಜಾಗೃತಿ ಫಲಕಗಳನ್ನು ಅಳವಡಿಸಲು ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯ್ಕ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಶಶಿಕಾಂತ, ರೀಚ್ ಸಂಸ್ಥೆಯ ಅಧ್ಯಕ್ಷ ಸಿಂಹ ಸೇರಿದಂತೆ ಇತರರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್