
ಬಳ್ಳಾರಿ, 19 ಜೂನ್ (ಹಿ.ಸ.) :
ಆ್ಯಂಕರ್ : ಸಂಡೂರು ತಾಲ್ಲೂಕಿನ ಹಿರೆಕೆರೆಯಾಗಿನಹಳ್ಳಿ ಗ್ರಾಮದ ಮಹೇಶ್.ಹೆಚ್(34) ಕಾಣೆಯಾಗಿರುವ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ.
ಅಂದಾಜು 5.5 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿರುತ್ತಾನೆ. ಕನ್ನಡ, ತೆಲುಗು, ಹಿಂದಿ, ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಚೋರನೂರು ಪೊಲೀಸ್ ಠಾಣೆಯ ದೂ.08395-295100, ಪಿಎಸ್ಐ ಮೊ.9480803063, ಸಂಡೂರು ಸಿಪಿಐ ದೂ.08395-260100, ಅಥವಾ ಬಳ್ಳಾರಿ ಎಸ್.ಪಿ. ಕಚೇರಿ ದೂ.08392-258400 ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್