ಬಾದಾಮಿ ಬನಶಂಕರಿ ದೇವಿಗೆ ವಿಶೇಷ ಪೂಜೆ ; ನಾಡಿನ ಜನತೆಗೆ ಸುಖ-ಶಾಂತಿ, ಸಮೃದ್ಧಿಗಾಗಿ ಪ್ರಾರ್ಥನೆ
ಬಾಗಲಕೋಟೆ, 19 ಜೂನ್ (ಹಿ.ಸ.) : ಆಂಕರ್ : ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಬಾದಾಮಿಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಬನಶಂಕರಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಆರ್ ಬಿ ತಿಮ್ಮಾಪುರ ಜಗನ್ಮಾತೆ ಶ್ರೀ ಬನಶಂಕರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಿಯ ಸನ್ನಿಧಿ
ಪೂಜೆ


ಬಾಗಲಕೋಟೆ, 19 ಜೂನ್ (ಹಿ.ಸ.) :

ಆಂಕರ್ : ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಬಾದಾಮಿಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಬನಶಂಕರಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಆರ್ ಬಿ ತಿಮ್ಮಾಪುರ ಜಗನ್ಮಾತೆ ಶ್ರೀ ಬನಶಂಕರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಿಯ ಸನ್ನಿಧಿಯಲ್ಲಿ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿ, ಸಮಸ್ತ ನಾಡಿನ ಜನತೆಗೆ ಆಯುಷ್ಯ, ಆರೋಗ್ಯ, ಸುಖ-ಶಾಂತಿ ಹಾಗೂ ಸಮೃದ್ಧಿ ಲಭಿಸಲಿ ಎಂದು ಬೇಡಿಕೊಳ್ಳಲಾಯಿತು. ಜಗನ್ಮಾತೆಯ ಕೃಪೆಯಿಂದ ಎಲ್ಲರ ಜೀವನದಲ್ಲಿ ನೆಮ್ಮದಿ, ಸಂತೋಷ ಹಾಗೂ ಅಭಿವೃದ್ಧಿ ನೆಲೆಸಲಿ ಎಂಬ ಆಶಯ ವ್ಯಕ್ತಪಡಿಸಲಾಯಿತು.

ಬಾದಾಮಿ ಬನಶಂಕರಿ ಕ್ಷೇತ್ರವು ರಾಜ್ಯದ ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾಗಿದ್ದು, ಪ್ರತಿನಿತ್ಯ ಸಾವಿರಾರು ಭಕ್ತರು ದೇವಿಯ ದರ್ಶನಕ್ಕಾಗಿ ಆಗಮಿಸುತ್ತಾರೆ. ವಿಶೇಷ ಪೂಜೆಯ ಸಂದರ್ಭದಲ್ಲಿ ಭಕ್ತರು ದೇವಿಯ ಆಶೀರ್ವಾದ ಪಡೆದು ಧಾರ್ಮಿಕ ಭಾವನೆಯಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ಮುಖಂಡರಾದ ಶಶಿ ಕುಲಕರ್ಣಿ, ಅಶೋಕ ಕೊಟ್ಕಂಕರ, ಉಮೇಶ ಪೂಜಾರಿ, ಪರಮಾನಂದ ಕುಟ್ಟರಟ್ಟಿ ಸೇರಿದಂತೆ ಹಲವು ಗಣ್ಯರು, ಮುಖಂಡರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande