ರೈತರ ಹೆಸರಿನಲ್ಲಿ ಹಗಲು ದರೋಡೆ : ಆರ್. ಅಶೋಕ
ಬೆಂಗಳೂರು, 02 ಜೂನ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ವೆಂಕಟೇಶ್ವರ ಏತ ನೀರಾವರಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ರೈತರ ಹೆಸರಿನಲ್ಲಿ ಹಗಲು ದರೋಡೆ ನಡೆದಿದೆ ಎಂದು ಸರ್ಕಾರದ ವಿರುದ್ಧ ತೀವ್ರ
ಅಶೋಕ


ಬೆಂಗಳೂರು, 02 ಜೂನ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ವೆಂಕಟೇಶ್ವರ ಏತ ನೀರಾವರಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ರೈತರ ಹೆಸರಿನಲ್ಲಿ ಹಗಲು ದರೋಡೆ ನಡೆದಿದೆ ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ರೈತರ ಪಾಲಿಗೆ ವರದಾನವಾಗಬೇಕಿದ್ದ ವೆಂಕಟೇಶ್ವರ ಏತ ನೀರಾವರಿ ಯೋಜನೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಬೇಜವಾಬ್ದಾರಿತನದಿಂದ ಶಾಪವಾಗಿ ಪರಿಣಮಿಸಿದೆ ಎಂದು ಆರೋಪಿಸಿದ್ದಾರೆ.

ಯೋಜನೆಗಾಗಿ ₹174.42 ಕೋಟಿ ಸಾರ್ವಜನಿಕ ಹಣ ವೆಚ್ಚ ಮಾಡಲಾಗಿದ್ದು, ಕಾಮಗಾರಿ ಪೂರ್ಣಗೊಂಡು ಎರಡುೂವರೆ ವರ್ಷಗಳಾದರೂ ರೈತರ ಜಮೀನುಗಳಿಗೆ ಒಂದು ಹನಿ ನೀರೂ ಹರಿದಿಲ್ಲ ಎಂದು ಅವರು ದೂರಿದ್ದಾರೆ.

ಕೃಷ್ಣಾ ನದಿಯಿಂದ 0.75 ಟಿಎಂಸಿ ನೀರನ್ನು ಬಳಸಿ ಸುಮಾರು 17,991 ಎಕರೆ ಒಣಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಭರವಸೆ ನೀಡಲಾಗಿತ್ತು. ಆದರೆ ಆ ಭರವಸೆ ಈಡೇರಿಲ್ಲ ಎಂದು ಹೇಳಿದ್ದಾರೆ.

ಕುಲಹಳ್ಳಿ, ಜಕಾವೆಲ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ನೀರು ಪೂರೈಕೆ ಮಾಡುವುದಾಗಿ ಘೋಷಿಸಿದ್ದರೂ, ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಸಮರ್ಪಕ ಪರಿಹಾರ ಧನ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಜಗದಾಳ, ನಾವಲಗಿ, ಕುಲಹಳ್ಳಿ, ಹುಲ್ಯಾಳ, ಮರೆಗುದ್ದಿ, ಬುದ್ದಿ, ಮಾಲಾಪುರ ಹಾಗೂ ಚಿಮ್ಮಡ ಭಾಗಗಳ ಸಾವಿರಾರು ರೈತರು ನ್ಯಾಯಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

ಯೋಜನೆ ಪೂರ್ಣಗೊಂಡಿದ್ದರೂ ನೀರು ಹರಿಯದ ಕಾರಣ, ರೈತರು ತಮ್ಮ ಜಮೀನಿನಲ್ಲಿ ಹಾದುಹೋಗಿದ್ದ ಮುಖ್ಯ ಹಾಗೂ ಉಪ ಕಾಲುವೆಗಳನ್ನು ಮುಚ್ಚಿ ಅದರ ಮೇಲೆ ಬೆಳೆ ಬೆಳೆಯುವಂತಾಗಿದೆ ಎಂದು ಅಶೋಕ ಹೇಳಿದ್ದಾರೆ. ಇದು ಆಡಳಿತ ವೈಫಲ್ಯ ಮಾತ್ರವಲ್ಲ, ರೈತರಿಗೆ ಮಾಡಿದ ಮಹಾದ್ರೋಹವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೆಲವೇ ತಿಂಗಳಲ್ಲಿ ಪರಿಹಾರ ನೀಡುವುದಾಗಿ ಭರವಸೆ ನೀಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಹೇಳಿದ್ದಾರೆ.

ವಂಚನೆಗೊಳಗಾದ ರೈತರಿಗೆ ತಕ್ಷಣ ಸಂಪೂರ್ಣ ಪರಿಹಾರ ಧನ ವಿತರಿಸಬೇಕು ಹಾಗೂ ಕಾಲುವೆಗಳಿಗೆ ನೀರು ಹರಿಸುವ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande