
ಬೆಂಗಳೂರು, 02 ಜೂನ್ (ಹಿ.ಸ.) :
ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಕರ್ನಾಟಕ ರಾಜ್ಯದಾದ್ಯಂತ ಸದ್ಯ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಮಧ್ಯಾಹ್ನದ ನಂತರ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ.
ರಾಜ್ಯದ ನಾನಾ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಗಂಟೆಗೆ 30ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.
ಕರಾವಳಿ ಜಿಲ್ಲೆಗಳು (ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ) ಜೂನ್ 3ರಿಂದ 5ರವರೆಗೆ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆ.
ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 4ರವರೆಗೆ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.