ಎಂ.ಬಿ. ಪಾಟೀಲರು ಡಿಸಿಎಂ ಆಗಲಿ ಎಂದು ಸಂಗಮನಾಥ ದೇವರಲ್ಲಿ ವಿಶೇಷ ಪೂಜೆ
ವಿಜಯಪುರ, 02 ಜೂನ್ (ಹಿ.ಸ.) : ಆಂಕರ್ : ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ತಿಕೋಟಾ ತಾಲೂಕಿನ ಕಳ್ಳಕವಟಿಗಿ ಗ್ರಾಮದ ಹಿರಿಯರು ಹಾಗೂ ಯುವಕರು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅವರು ರಾಜ್ಯದ ನೂತನ ಉಪ
ಪೂಜೆ


ವಿಜಯಪುರ, 02 ಜೂನ್ (ಹಿ.ಸ.) :

ಆಂಕರ್ : ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ತಿಕೋಟಾ ತಾಲೂಕಿನ ಕಳ್ಳಕವಟಿಗಿ ಗ್ರಾಮದ ಹಿರಿಯರು ಹಾಗೂ ಯುವಕರು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅವರು ರಾಜ್ಯದ ನೂತನ ಉಪ ಮುಖ್ಯಮಂತ್ರಿ (ಡಿಸಿಎಂ) ಆಗಿ ಆಯ್ಕೆಯಾಗಬೇಕು ಎಂದು ಪ್ರಾರ್ಥಿಸಿ ಸಂಗಮನಾಥ ದೇವರ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಗ್ರಾಮದ ಸಂಗಮನಾಥ ದೇವಾಲಯದಲ್ಲಿ ಹಮ್ಮಿಕೊಳ್ಳಲಾದ ಪೂಜಾ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಎಂ.ಬಿ. ಪಾಟೀಲ ಅವರಿಗೆ ಉನ್ನತ ರಾಜಕೀಯ ಸ್ಥಾನಮಾನ ದೊರೆಯಲಿ ಹಾಗೂ ರಾಜ್ಯದ ಅಭಿವೃದ್ಧಿಯಲ್ಲಿ ಇನ್ನಷ್ಟು ಮಹತ್ವದ ಪಾತ್ರ ವಹಿಸುವ ಅವಕಾಶ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ಎಂ.ಬಿ. ಪಾಟೀಲ ಅವರು ಹಲವು ವರ್ಷಗಳಿಂದ ಬಬಲೇಶ್ವರ ಮತಕ್ಷೇತ್ರ ಸೇರಿದಂತೆ ವಿಜಯಪುರ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದು, ನೀರಾವರಿ, ಶಿಕ್ಷಣ, ಕೈಗಾರಿಕೆ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಹೇಳಿದರು. ಅವರ ಅನುಭವ, ಆಡಳಿತಾತ್ಮಕ ಸಾಮರ್ಥ್ಯ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ರಾಜ್ಯ ಸರ್ಕಾರದಲ್ಲಿ ಅವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಚಿವ ಸಂಪುಟ ರಚನೆ ಕುರಿತು ನಿರ್ಧಾರ ಕೈಗೊಳ್ಳುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆಯಬೇಕು. ಎಂ.ಬಿ. ಪಾಟೀಲ ಅವರಿಗೆ ಡಿಸಿಎಂ ಹುದ್ದೆ ನೀಡುವುದರಿಂದ ಈ ಭಾಗದ ಜನರ ಆಶಯಗಳಿಗೆ ಸ್ಪಂದಿಸಿದಂತಾಗುತ್ತದೆ ಎಂದು ಗ್ರಾಮಸ್ಥರು ಹೇಳಿದರು.

ಪೂಜೆ ಬಳಿಕ ಭಕ್ತರು ವಿಶೇಷ ಆರತಿ ಸಲ್ಲಿಸಿ, ರಾಜ್ಯದ ಸುಭಿಕ್ಷತೆ, ಉತ್ತಮ ಮಳೆ, ರೈತರ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಯುವಕರು, ಮುಖಂಡರು ಹಾಗೂ ಭಕ್ತರು ಭಾಗವಹಿಸಿ ಪೂಜೆಗೆ ಮೆರುಗು ತಂದರು.

ಗ್ರಾಮಸ್ಥರ ಈ ಧಾರ್ಮಿಕ ಕಾರ್ಯಕ್ರಮವು ರಾಜಕೀಯ ಬೆಳವಣಿಗೆಗಳ ನಡುವೆಯೇ ಗಮನ ಸೆಳೆದಿದ್ದು, ಎಂ.ಬಿ. ಪಾಟೀಲರಿಗೆ ಉನ್ನತ ಹುದ್ದೆ ದೊರೆಯಲಿ ಎಂಬ ಆಶಯವನ್ನು ವ್ಯಕ್ತಪಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande