
ಬಳ್ಳಾರಿ, 02 ಜೂನ್ (ಹಿ.ಸ.) :
ಆ್ಯಂಕರ್ : ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-27ನೇ ಸಾಲಿಗೆ ಡಿಪೆÇ್ಲೀಮಾ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಕಾಲೇಜಿನಲ್ಲಿ ಪಡೆದುಕೊಂಡು ಭರ್ತಿ ಮಾಡಿದ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಇದೇ ಪಾಲಿಟೆಕ್ನಿಕ್ ಕಾಲೇಜ್ನ ಪ್ರಾಂಶುಪಾಲರ ಕಚೇರಿಗೆ ಜೂನ್ 6 ಸಂಜೆ 05 ಗಂಟೆಯೊಳಗೆ ಸಲ್ಲಿಸಬಹುದು.
ಜೂನ್ 8 ರಂದು ಬೆಳಿಗ್ಗೆ 11 ಗಂಟೆಗೆ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಿದ್ದು, ಜೂನ್ 9 ರ ಸಂಜೆ 04 ರ ವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಜೂನ್ 10 ರಂದು ಸಂಜೆ 05 ಗಂಟೆಗೆ ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಜೂನ್ 11 ರಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-294371 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್