ನೂತನ ಸಚಿವ ಸಂಪುಟ ರಚನೆಗೆ ದೆಹಲಿಯಲ್ಲಿ ಮಹತ್ವದ ಚರ್ಚೆ
ನವದೆಹಲಿ, 02 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕದಲ್ಲಿ ನೂತನ ಸರ್ಕಾರ ರಚನೆ ಹಾಗೂ ಸಚಿವ ಸಂಪುಟಕ್ಕೆ ಅಂತಿಮ ರೂಪ ನೀಡುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ನ ಹಿರಿಯ ನಾಯಕರು ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಂಗಾಮಿ ಮುಖ್ಯಮಂತ್
ಜೈಶಂಕರ ಸಿದ್ದರಾಮಯ್ಯ ಭೇಟಿ


ನವದೆಹಲಿ, 02 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕದಲ್ಲಿ ನೂತನ ಸರ್ಕಾರ ರಚನೆ ಹಾಗೂ ಸಚಿವ ಸಂಪುಟಕ್ಕೆ ಅಂತಿಮ ರೂಪ ನೀಡುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ನ ಹಿರಿಯ ನಾಯಕರು ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಲು ರಾಷ್ಟ್ರ ರಾಜಧಾನಿಯಲ್ಲಿ ತಂಗಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ನಡೆಯಲಿರುವ ಸಭೆಯಲ್ಲಿ ಸಚಿವ ಸಂಪುಟ ರಚನೆ, ಪ್ರಮುಖ ಹುದ್ದೆಗಳ ನೇಮಕಾತಿ ಹಾಗೂ ಸಂಘಟನಾ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಈ ನಡುವೆ ದೆಹಲಿಯ ಹೋಟೆಲ್ನಿಂದ ಹೊರಬರುತ್ತಿದ್ದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಭೇಟಿಯಾದರು. ಬಳಿಕ ಸುದ್ದಿಗಾರರು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ನಡೆಯಲಿರುವ ಸಭೆಯ ಕಾರ್ಯಸೂಚಿ ಕುರಿತು ಪ್ರಶ್ನಿಸಿದಾಗ, ಸಭೆಯಲ್ಲಿ ಯಾವ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂಬುದು ನನಗೆ ತಿಳಿದಿಲ್ಲ ಎಂದು ಉತ್ತರಿಸಿದರು.

ಪಕ್ಷದ ಮೂಲಗಳ ಪ್ರಕಾರ, ಸಚಿವ ಸಂಪುಟ ರಚನೆ ಕುರಿತ ಚರ್ಚೆಗೆ ಮುನ್ನ ಡಿ.ಕೆ. ಶಿವಕುಮಾರ್ ಅವರು ಸಂಭಾವ್ಯ ಸಚಿವರ ಪ್ರಾಥಮಿಕ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ನೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಈ ಪಟ್ಟಿಗೆ ಅಂತಿಮ ರೂಪ ನೀಡಲಾಗುವುದು ಎನ್ನಲಾಗಿದೆ.

ಮೊದಲ ಹಂತದಲ್ಲಿ 10 ರಿಂದ 20 ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಪ್ರಾದೇಶಿಕ, ಸಾಮಾಜಿಕ ಹಾಗೂ ರಾಜಕೀಯ ಸಮತೋಲನವನ್ನು ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟವನ್ನು ರೂಪಿಸುವ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ನೂತನ ಸರ್ಕಾರ ರಚನೆಗೆ ಸಂಬಂಧಿಸಿದ ಬಹುತೇಕ ವಿಷಯಗಳಲ್ಲಿ ಈಗಾಗಲೇ ಒಮ್ಮತ ಮೂಡಿದ್ದು, ಅಂತಿಮ ಅನುಮೋದನೆಯ ನಂತರ ಸಚಿವರ ಹೆಸರುಗಳನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭವು ನಾಳೆ ಬೆಂಗಳೂರಿನಲ್ಲಿ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಮೊದಲ ಹಂತದ ಸಚಿವ ಸಂಪುಟ ಸದಸ್ಯರೂ ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆಯಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande