ಕದ್ರಳ್ಳಿ ಗ್ರಾಮದ ಎನ್.ಆರ್.ಇಜಿ ಕೂಲಿ ಕಾರ್ಮಿಕರಿಗೆ ಅರಿವು
ಕೊಪ್ಪಳ, 20 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕುಕನೂರು ತಾಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ಚಿಕ್ಕಬಿಡನಾಳ ಗ್ರಾಮ
Awareness for NREG wage workers of Kadralli village


ಕೊಪ್ಪಳ, 20 ಜೂನ್ (ಹಿ.ಸ.) :

ಆ್ಯಂಕರ್ : ಕೊಪ್ಪಳ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕುಕನೂರು ತಾಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ಚಿಕ್ಕಬಿಡನಾಳ ಗ್ರಾಮ ಪಂಚಾಯತ್ ಇವರುಗಳ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಕದ್ರಳ್ಳಿ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮದ ಮೂಲಕ ಮಕ್ಕಳ ಹಕ್ಕುಗಳು, ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ ಕುರಿತು ನರೇಗಾ ಕೂಲಿ ಕಾರ್ಮಿಕರಿಗೆ ಅರಿವು ಮೂಡಿಸಲಾಯಿತು.

ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಅಸಾಂಸ್ಥಿಕ) ರವಿ ಬಡಿಗೇರ ಅವರು ಪೋಷಕತ್ವ ಯೋಜನೆಯ ಕುರಿತು ಮಾತನಾಡಿ, ಪೋಷಕತ್ವ ಯೊಜನೆಗೆ ಅರ್ಹರು ಅರ್ಜಿ ಸಲ್ಲಿಸಬೇಕು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಮಕ್ಕಳ ನ್ಯಾಯ ಕಾಯ್ದೆ-2015 ಸೆಕ್ಷನ್ 44 ರನ್ವಯ ಪೋಷಕತ್ವ ಯೋಜನೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳ ಕಲ್ಯಾಣ ಸಮಿತಿಯ ವತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ಹೋಗಲು ಸಾಧ್ಯವಾಗದಿರುವ (ಅನಾಥ) ಜೈವಿಕ ಪೋಷಕರಿಂದ ಬೇರ್ಪಟ್ಟ ಮಕ್ಕಳು, ಮಾರಣಾಂತಿಕ ಖಾಯಿಲೆಯಿಂದ ಬಳತ್ತಿರುವ ಪೋಷಕರ ಮಕ್ಕಳು, ಸುಮಾರು 6 ತಿಂಗಳಿಂದ 1 ವರ್ಷದವರೆಗೆ ಮಗುವಿನೊಂದಿಗೆ ಕುಟುಂಬದ ಯಾವಿಬ್ಬ ಸದಸ್ಯರು ಸಂಪರ್ಕಕ್ಕೆ ಬಾರದೇ ಇರುವಂತಹ ಮಕ್ಕಳು, ಕೌಟುಂಬಿಕ ಪ್ರೀತಿಯಿಂದ ವಂಚಿತವಾದ ಮಕ್ಕಳಿಗೆ ಪರ್ಯಾಯ ಕುಟುಂಬ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಹೆತ್ತವರ ಪ್ರೀತಿಯನ್ನು ನೀಡುವ ಅತ್ಯುತ್ತಮ ಯೋಜನೆಯಾಗಿದೆ. ತಂದೆ-ತಾಯಿಯ ಪ್ರೀತಿಯಿಂದ ವಂಚಿತವಾದ ಮಕ್ಕಳಿಗೆ ಕೌಟುಂಬಿಕ ಪ್ರೀತಿಯನ್ನು ನೀಡಿ ಮಗುವಿಗೆ ಉತ್ತಮ ಭವಿಷ್ಯವನ್ನು ರೂಪಿಸುವ ಇಚ್ಛೆಯನ್ನು ಹೊಂದಿರುವ ಯಾವುದೇ ಪೋಷಕರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ಅಲ್ಲದೇ ಮಕ್ಕಳ ನಾಲ್ಕು ಮುಖ್ಯ ಹಕ್ಕುಗಳಾದ ಬದುಕುವ, ರಕ್ಷಣೆಯ, ವಿಕಾಸ ಹೊಂದುವ ಹಾಗೂ ಭಾಗವಹಿಸುವ ಹಕ್ಕುಗಳು ಮತ್ತು ಬಾಲ್ಯವಿವಾಹ ಕಾಯ್ದೆ-2006 ಹಾಗೂ ಪೊಕ್ಸೋ ಕಾಯ್ದೆಯ ಕುರಿತು ಮಾಹಿತಿ ನೀಡಿದರು.

ಮಕ್ಕಳ ಸಹಾಯವಾಣಿ-1098 ಕೊಪ್ಪಳದ ವಿಷಯ ನಿರ್ವಾಹಕ ರಾಘವೇಂದ್ರ ಕುಲಕರ್ಣಿ ಅವರು ಮಾತನಾಡಿ, ಮಕ್ಕಳು ಬಾಲಕಾರ್ಮಿಕತೆಯಲ್ಲಿ ತೊಡಗಿದ್ದರೆ, 18 ವರ್ಷದೊಳಗಿನ ಹೆಣ್ಣು ಮತ್ತು 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹ ಮಾಡದಿರೆ ಅದು ಬಾಲ್ಯವಿವಾಹ ಆಗುತ್ತದೆ.

ಬಾಲ್ಯವಿವಾಹ ಮಾಡುವ ಅಥವಾ ಪೂರ್ವ ತಯಾರಿ ಮಾಡುವಲ್ಲಿ ಭಾಗಿಯಾದರೆ, ಮಕ್ಕಳು ಭಿಕ್ಷೆ ಬೇಡುತ್ತಿದ್ದರೆ, ಮಕ್ಕಳನ್ನು ಎಲ್ಲಂದರಲ್ಲಿ ಬಿಸಾಕಿ ಹೋದರೆ, ಚಿಂದಿ ಆಯುತ್ತಿರುವ ಮಕ್ಕಳಿದ್ದರೆ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಕಂಡು ಬಂದರೆ ಮತ್ತು ಆರೈಕೆ ಪೋಷಣೆ ಅವಶ್ಯಕತೆಯಿರುವ ಮಕ್ಕಳು ಕಂಡು ಬಂದರೆ ಮಕ್ಕಳ ಸಹಾಯವಾಣಿ-1098ಕ್ಕೆ ಕರೆ ಮಾಡಿದಲ್ಲಿ 24 ಗಂಟೆಯೊಳಗೆ ಸ್ಥಳಕ್ಕೆ ಧಾವಿಸಿ ಮಕ್ಕಳ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯೋಗ ಖಾತ್ರಿ ಮೇಟ್ ವಿಜಯ ಅವರು ವಹಿಸಿದ್ದರು. ಮಂಜುನಾಥ ಬಿ.ಎಫ್.ಟಿ ಅವರು ಕಾರ್ಯಕ್ರಮ ನಿರೂಪಿಸಿ ನೆರವೇರಿಸಿದರು. ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande