ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಬಿ.ವಿ.ಎ. ಪ್ರವೇಶಾತಿಗೆ ಅರ್ಜಿ ಆಹ್ವಾನ
ಕೊಪ್ಪಳ, 20 ಜೂನ್ (ಹಿ.ಸ.) : ಆ್ಯಂಕರ್ : ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ವಿ.ಎ. (Bachelor of Visual Arts) ಪದವಿ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯ ಶಿಕ್ಷಣ
ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಬಿ.ವಿ.ಎ. ಪ್ರವೇಶಾತಿಗೆ ಅರ್ಜಿ ಆಹ್ವಾನ


ಕೊಪ್ಪಳ, 20 ಜೂನ್ (ಹಿ.ಸ.) :

ಆ್ಯಂಕರ್ : ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ವಿ.ಎ. (Bachelor of Visual Arts) ಪದವಿ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ರಾಜ್ಯ ಶಿಕ್ಷಣ ನೀತಿ (ಎಸ್.ಇ.ಪಿ) ಅನ್ವಯ ನಾಲ್ಕು ವರ್ಷಗಳ ಎಂಟು ಸೆಮಿಸ್ಟರ್ಗಳ ಈ ಪದವಿ ಕೋರ್ಸ್ಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಕಾಲೇಜಿನಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಷಯಗಳಲ್ಲಿ ವಿಶೇಷ ಅಧ್ಯಯನದ ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು https://uucms.karnataka.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಜೂನ್ 22 ಕೊನೆಯ ದಿನವಾಗಿದ್ದು, ಪ್ರವೇಶಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜೂನ್ 23ರಂದು ಅರ್ಹತಾ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನವನ್ನು ನಡೆಸಲಾಗುವುದು. ಆಯ್ಕೆ ಪ್ರಕ್ರಿಯೆಯಲ್ಲಿ ಈ ಪರೀಕ್ಷೆ ಮತ್ತು ಸಂದರ್ಶನದ ಫಲಿತಾಂಶವನ್ನು ಪರಿಗಣಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ 0821-2438931 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಸಿದ್ದಾರ್ಥನಗರ ಮೈಸೂರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande