ನಾಳೆ ಯೋಗ ದಿನಾಚರಣೆ
ಕೊಪ್ಪಳ, 20 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುμï ಇಲಾಖೆ ಹಾಗೂ ಜಿಲ್ಲೆಯ ಸರ್ವಯೋಗ ಸಂಸ್ಥೆಗಳ ಸಹಯೋಗದಲ್ಲಿ 12ನೇ ಯೋಗ ದಿನಾಚರಣೆ-2026ರ ಅಂಗವಾಗಿ ``ಆರೋಗ್ಯಕರ ವೃದ್ದಾಪ್ಯಕ್ಕಾಗಿ ಯೋಗ'''' ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಯೋಗ ಮಹೋತ್ಸವವನ್ನು ಜ
International Yoga Day on June 21st


International Yoga Day on June 21st


ಕೊಪ್ಪಳ, 20 ಜೂನ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುμï ಇಲಾಖೆ ಹಾಗೂ ಜಿಲ್ಲೆಯ ಸರ್ವಯೋಗ ಸಂಸ್ಥೆಗಳ ಸಹಯೋಗದಲ್ಲಿ 12ನೇ ಯೋಗ ದಿನಾಚರಣೆ-2026ರ ಅಂಗವಾಗಿ ``ಆರೋಗ್ಯಕರ ವೃದ್ದಾಪ್ಯಕ್ಕಾಗಿ ಯೋಗ'' ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಯೋಗ ಮಹೋತ್ಸವವನ್ನು ಜೂನ್ 21 ರಂದು ಭಾನುವಾರ ಬೆಳಿಗ್ಗೆ 6.30 ಗಂಟೆಗೆ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಯು.ಟಿ. ಖಾದರ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ, ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ತಂಗಡಗಿ ಶಿವರಾಜ ಸಂಗಪ್ಪ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ವಿ. ಗಡಾದ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಪಾಲ್ಗೊಳ್ಳುವರು.

ವಿಶೇಷ ಆಹ್ವಾನಿತರಾಗಿ ಬೆಂಗಳೂರು ಆಯುμï ನಿರ್ದೇಶನಾಲಯದ ಆಯುಕ್ತರಾದ ಡಾ.ಸುನಿಲ್ ಪಂವಾರ್, ವಸತಿ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ರಾಜ್ ಅವರು ಆಗಮಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಕೊಪ್ಪಳ ಜಿಲ್ಲಾ ಆಯುμï ಅಧಿಕಾರಿಗಳಾದ ಡಾ.ಪರ್ವತಗೌಡ.ಬ.ಹಿರೇಗೌಡರ ಅವರು ಉಪಸ್ಥಿತರಿರುವರು.

ಯೋಗ ಜಾಥಾ: 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 20ರ ಶನಿವಾರ ಮಧ್ಯಾಹ್ನ 4 ಗಂಟೆಯಿಂದ 6 ಗಂಟೆಯವರೆಗೆ ಯೋಗ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಯೋಗ ಜಾಥವು ಶ್ರೀ ಗವಿಮಠದ ಆವರಣದಿಂದ ಪ್ರಾರಂಭಗೊಂಡು ಗಡಿಯಾರ ಕಂಬದಿಂದ ಅಶೋಕ ಸರ್ಕಲ್ ಮೂಲಕ ತಾಲೂಕು ಕ್ರೀಡಾಂಗಣದ ವರೆಗೆ ನಡೆಯಲಿದೆ.

ಕೊಪ್ಪಳ ಜಿಲ್ಲೆಯ ಎಲ್ಲಾ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಎ.ಎಫ್.ಐ ಮತ್ತು ಎನ್.ಐ.ಎಂ.ಎ ಕೊಪ್ಪಳ ಜಿಲ್ಲೆಯ ಸಮಸ್ತ ಯೋಗಾಭಿಮಾನಿಗಳು ಯೋಗ ಜಾಥಾ ಮತ್ತು ಯೋಗ ಮಹೋತ್ಸವದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande