ಕೌಶಲ್ಯಾಭಿವೃದ್ಧಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಕೊಪ್ಪಳ, 20 ಜೂನ್ (ಹಿ.ಸ.) : ಆ್ಯಂಕರ್ : ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನ ಎಸ್ಸಿಪಿ, ಟಿಎಸ್ಪಿ ಯೋಜನೆ ಅಡಿಯಲ್ಲಿ ಪ್ರವಾಸೋದ್ಯಮ ಅತಿಥಿ ಕ್ಷೇತ್ರದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಪ್ರವಾಸೋದ್ಯಮ, ಆತಿಥ್ಯ ಕ್ಷೇತ್ರದಲ್ಲಿ
Issuance of certificates to candidates


ಕೊಪ್ಪಳ, 20 ಜೂನ್ (ಹಿ.ಸ.) :

ಆ್ಯಂಕರ್ : ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನ ಎಸ್ಸಿಪಿ, ಟಿಎಸ್ಪಿ ಯೋಜನೆ ಅಡಿಯಲ್ಲಿ ಪ್ರವಾಸೋದ್ಯಮ ಅತಿಥಿ ಕ್ಷೇತ್ರದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

ಪ್ರವಾಸೋದ್ಯಮ, ಆತಿಥ್ಯ ಕ್ಷೇತ್ರದಲ್ಲಿ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಎಸ್ಸಿಪಿ, ಟಿಎಸ್ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥಿ ಕ್ಷೇತ್ರದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯ ರವಿಕುಮಾರ್ ರಾಥೋಡ್ ಮತ್ತು ರವಿ ಅವರು 2025ರ ಸೆಪ್ಟೆಂಬರ್ 15 ರಿಂದ 2025ರ ಡಿಸೆಂಬರ್ 30ರವರೆಗೆ `ಮಲ್ಟಿ ಕೂಸಿನ್ ಕುಕ್' ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ್ ಅವರು ಅಭ್ಯರ್ಥಿಗಳಿಗೆ ತರಬೇತಿ ಪೂರ್ಣಗೊಳಿಸಿರುವ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ಇದೇ ವೇಳೆ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande