ಕೆ.ವಿ. ಪ್ರಭಾಕರ್ ಜನ್ಮದಿನ ಸಂಭ್ರಮ
ಬೆಂಗಳೂರು, 20 ಜೂನ್ (ಹಿ.ಸ.) : ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರ ಜನ್ಮದಿನವನ್ನು ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಅದ್ದೂರಿಯಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಬೃಹತ್ ಗಾತ್ರದ ಹಾರಗಳನ್ನು ಹಾಕಿ, ಕೇಕ್ ಕತ್ತರಿಸುವ ಮೂಲಕ ಪ್ರಭಾಕರ್ ಅ
KVP birthday


Kvp


ಬೆಂಗಳೂರು, 20 ಜೂನ್ (ಹಿ.ಸ.) :

ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರ ಜನ್ಮದಿನವನ್ನು ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಅದ್ದೂರಿಯಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಬೃಹತ್ ಗಾತ್ರದ ಹಾರಗಳನ್ನು ಹಾಕಿ, ಕೇಕ್ ಕತ್ತರಿಸುವ ಮೂಲಕ ಪ್ರಭಾಕರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿ ಶುಭ ಹಾರೈಕೆಗಳನ್ನು ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆ.ವಿ. ಪ್ರಭಾಕರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು.

ಇದೇ ವೇಳೆ ವಿವಿಧ ಮಠಾಧೀಶರು, ಸಚಿವರು, ಶಾಸಕರು, ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ಅನೇಕ ಗಣ್ಯರು ಮತ್ತು ಅಭಿಮಾನಿ ಬಳಗದವರು ಉಪಸ್ಥಿತರಿದ್ದು, ಪ್ರಭಾಕರ್ ಅವರ ಆರೋಗ್ಯ, ಆಯುಷ್ಯ ಮತ್ತು ಯಶಸ್ಸಿಗಾಗಿ ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande