ಕೊಪ್ಪಳ ವಿಶ್ವವಿದ್ಯಾಲಯ ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
ಕೊಪ್ಪಳ, 20 ಜೂನ್ (ಹಿ.ಸ.) : ಆ್ಯಂಕರ್ : 2026-27ನೇ ಶೈಕ್ಷಣಿಕ ಸಾಲಿಗಾಗಿ ಕೊಪ್ಪಳ ವಿಶ್ವವಿದ್ಯಾಲಯವು ಯಲಬುರ್ಗಾದಲ್ಲಿರುವ ತನ್ನ ಸ್ನಾತಕ ಪದವಿ ವಿಭಾಗಗಳಲ್ಲಿ ಖಾಲಿ ಇರುವ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕೊಪ್ಪಳ ವಿಶ್ವವಿದ್ಯಾಲಯ ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ


ಕೊಪ್ಪಳ, 20 ಜೂನ್ (ಹಿ.ಸ.) :

ಆ್ಯಂಕರ್ : 2026-27ನೇ ಶೈಕ್ಷಣಿಕ ಸಾಲಿಗಾಗಿ ಕೊಪ್ಪಳ ವಿಶ್ವವಿದ್ಯಾಲಯವು ಯಲಬುರ್ಗಾದಲ್ಲಿರುವ ತನ್ನ ಸ್ನಾತಕ ಪದವಿ ವಿಭಾಗಗಳಲ್ಲಿ ಖಾಲಿ ಇರುವ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ವಿಶ್ವವಿದ್ಯಾಲಯದ ಪ್ರಕಟಣೆಯ ಪ್ರಕಾರ, ಯುಜಿಸಿ ನಿಯಮಾನುಸಾರ ತಾತ್ಕಾಲಿಕ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಕನ್ನಡ, ಇಂಗ್ಲಿμï, ವಾಣಿಜ್ಯಶಾಸ್ತ್ರ, ಇತಿಹಾಸ, ಅರ್ಥಶಾಸ್ತ್ರ ಹಾಗೂ ರಾಜ್ಯಶಾಸ್ತ್ರ ವಿಭಾಗಗಳಲ್ಲಿ ಒಟ್ಟು 16 ಹುದ್ದೆಗಳು ಭರ್ತಿಯಾಗಲಿವೆ.

ವಿಭಾಗವಾರು ಹುದ್ದೆಗಳ ವಿವರ ಹೀಗಿದೆ: ಕನ್ನಡ ವಿಭಾಗದಲ್ಲಿ 2 ಪೂರ್ಣಕಾಲಿಕ ಹಾಗೂ 1 ಅರೆಕಾಲಿಕ, ಇಂಗ್ಲಿಷ್ ವಿಭಾಗದಲ್ಲಿ 2 ಪೂರ್ಣಕಾಲಿಕ ಹಾಗೂ 1 ಅರೆಕಾಲಿಕ, ವಾಣಿಜ್ಯಶಾಸ್ತ್ರ ವಿಭಾಗದಲ್ಲಿ 3 ಪೂರ್ಣಕಾಲಿಕ ಹಾಗೂ 1 ಅರೆಕಾಲಿಕ, ಇತಿಹಾಸ, ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಭಾಗಗಳಲ್ಲಿ ತಲಾ 1 ಪೂರ್ಣಕಾಲಿಕ ಹಾಗೂ 1 ಅರೆಕಾಲಿಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅರ್ಜಿ ಶುಲ್ಕವನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 1,000 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ. 750 ನಿಗದಿಪಡಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಕೊಪ್ಪಳ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ನಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಶೈಕ್ಷಣಿಕ ದಾಖಲಾತಿಗಳ ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸಬೇಕು. ಇದರ ಜೊತೆಗೆ ಪ್ರಕಟಣೆಯಲ್ಲಿ ನೀಡಿರುವ ಗೂಗಲ್ ಫಾರ್ಮ್ ಅನ್ನು ಕಡ್ಡಾಯವಾಗಿ ಭರ್ತಿ ಮಾಡಿ, ಸಲ್ಲಿಕೆಯ ಯಶಸ್ವಿ ಪ್ರತಿಯನ್ನು ಅರ್ಜಿಯೊಂದಿಗೆ ಸೇರಿಸಬೇಕಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳು ಹಾಗೂ ಶುಲ್ಕ ಪಾವತಿ ರಶೀದಿಯೊಂದಿಗೆ ಜುಲೈ 3, 2026ರ ಸಂಜೆ 5 ಗಂಟೆಯೊಳಗೆ ಕುಲಸಚಿವರು, ಕೊಪ್ಪಳ ವಿಶ್ವವಿದ್ಯಾಲಯ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯದ ಆವರಣ, ಕೊಪ್ಪಳ – 583238 ವಿಳಾಸಕ್ಕೆ ಮುದ್ದಾಂ ಅಥವಾ ರಿಜಿಸ್ಟರ್ಡ್ ಅಂಚೆ ಮೂಲಕ ತಲುಪಿಸಬೇಕು.

ಸಂದರ್ಶನದ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ವಿಶ್ವವಿದ್ಯಾಲಯದ ವೆಬ್ಸೈಟ್ ಹಾಗೂ ಅಭ್ಯರ್ಥಿಗಳ ಇ-ಮೇಲ್ ಅಥವಾ ವಾಟ್ಸಾಪ್ ಮೂಲಕ ಪ್ರಕಟಿಸಲಾಗುವುದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande