ಕುವೆಂಪು ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ; ಮಲೇರಿಯಾ ವಿರೋಧಿ ಮಾಸಾಚರಣೆ
ಕೊಪ್ಪಳ, 20 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ನಗರ ಪ್ರದೇಶದ ಕುವೆಂಪು ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಮಲೇರಿಯಾ ವಿರೋಧಿ ಮಾಸಾಚ
Kuvempu Nagar Government Higher Primary School: Anti-Malaria Month Celebration


ಕೊಪ್ಪಳ, 20 ಜೂನ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ನಗರ ಪ್ರದೇಶದ ಕುವೆಂಪು ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಮಲೇರಿಯಾ ವಿರೋಧಿ ಮಾಸಾಚರಣೆ” ಜಾಗೃತಿ ಕಾರ್ಯಕ್ರಮ ನಡೆಯಿತು.

ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ದೇವಮ್ಮ ಅವರು ಕಾರ್ಯಕ್ರಮ ಕುರಿತು ಮಾತನಾಡಿ, ಪ್ರತಿ ವರ್ಷ ಜೂನ್ ತಿಂಗಳಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರವನ್ನು ಆಚರಿಸಲಾಗುತ್ತದೆ. ಇದರ ಉದ್ದೇಶ ಜೂನ್ ತಿಂಗಳಲ್ಲಿ ಮಳೆಗಾಲ ಪ್ರಾರಂಭವಾಗುವುದರಿಂದ ನಿಂತ ನೀರಿನಲ್ಲಿ ಸೋಂಕಿತ ಸೊಳ್ಳೆಗಳು ಹೆಚ್ಚಾಗಿ ಮನುಷ್ಯರಿಗೆ ಒಬ್ಬರಿಂದ ಇನ್ನೊಬ್ಬರಿಗೆ ಕಚ್ಚುವುದರಿಂದ ಮಲೇರಿಯಾ ರೋಗ ಹರಡುತ್ತದೆ.

ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಜಾಗೃತಿ ಕಾರ್ಯಕ್ರಮ ಆಚರಿಸಲಾಗುತ್ತದೆ. ಸೋಂಕಿತ ಅನಾಫಿಲಿಸ್ ಹೆಣ್ಣು ಸೊಳ್ಳೆಗಳು ನೀರಿನಲ್ಲಿ ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುತ್ತ್ತವೆ. ಮೊಟ್ಟೆಗಳ ಬೆಳವಣಿಗೆಗಾಗಿ ಮನುಷ್ಯನಿಗೆ ಕಚ್ಚುವುದರಿಂದ ಖಾಯಿಲೆ ಹರಡುತ್ತದೆ. ಈ ರೋಗದ ಲಕ್ಷಣಗಳು ತಲೆನೋವು, ವಾಂತಿ, ವಿಪರೀತ ಚಳಿಜ್ವರ, ಮೈನಡಕ ಲಕ್ಷಣಗಳಿದ್ದರೆ ತಕ್ಷಣ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಬೇಟಿನೀಡಿ ಅಥವಾ ಆರೋಗ್ಯ ಸಿಬ್ಬಂದಿಗಳ ಜೊತೆ ರಕ್ತ ಪರೀಕ್ಷೆ ಮಾಡಿಸಿ, ಖಚಿತ ಪಟ್ಟರೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಜ್ವರದ ಬಗ್ಗೆ ನಿರ್ಲಕ್ಷ ಮಾಡಬಾರದೆಂದು ತಿಳಿಸಿದರು.

“ಮಲೇರಿಯಾ ಅಂತ್ಯಗೊಳಿಸಲು ಸಂಕಲ್ಪ ಮಾಡೋಣ:ನಮಗಿದು ಸಾಧ್ಯವಿದೆ, ನಾವು ಇದನ್ನು ಮಾಡಲೇಬೇಕು” ಎಂಬ ಈ ವರ್ಷದ ಘೋಷ್ಯವಾಕ್ಯದೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತದೆ. ಇದರ ನಿಯಂತ್ರಣಕ್ಕಾಗಿ ತಮ್ಮ ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಸಾಯಂಕಾಲ ವೇಳೆ ಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆ ಮಾಡಿಕೊಳ್ಳಬೇಕು.

“ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ” ಮನೆಯಲ್ಲಿ ನೀರು ಶೇಖರಣ ತೋಟ್ಟಿಗಳಲ್ಲಿ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಸಂತಾನಭಿವೃದ್ಧಿ ಮಾಡುತ್ತ್ತವೆ. ಲಾರ್ವಾ ನಾಶಕ್ಕಾಗಿ ಸ್ವಚ್ಚಗೊಳಿಸತ್ತಿರಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಮನೆಬೇಟಿ ನೀಡಿದಾಗ ಸಹಕರಿಸಿ, ರಕ್ತಲೇಪನ ನೀಡಿ, ಡೆಂಗ್ಯೂ ಖಾಯಿಲೆಯನ್ನು ತಡೆಗಟ್ಟುವ ಸಲುವಾಗಿ ಈಡಿಸ್ ಸೊಳ್ಳೆ ಉತ್ಪತ್ತಿ ರಹೀತ ಶಾಲಾ ಆವರಣ ಮಾಡುವುದು ಅವಶ್ಯವಾಗಿರುತ್ತದೆ ಎಂದು ಹೇಳಿದರು.

ಶಾಲಾ ಮುಖ್ಯೋಪಾದ್ಯಾಯರಾದ ಹೆಚ್.ಎಂ ಹನುಮಂತಪ್ಪ ತಳವಾರ ಅವರು ತಮ್ಮ ಅಧ್ಯಕ್ಷರ ಭಾಷಣದಲ್ಲಿ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ತಮ್ಮ ತಮ್ಮ ಗ್ರಾಮಗಳಲ್ಲಿ ಹಾಗೂ ಸುತ್ತ್ತ ಮುತ್ತ್ತಲಿನ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಹೇಳಿದರು.

ಸಹ ಶಿಕ್ಷಕರಾದ ಮಂಜುಳಾ ಅವರ ಎಲ್ಲರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅನಿತಾ, ನೌಶಾದಬೇಗಂ, ಪೂರ್ಣಿಮಾ ಸೇರಿದಂತೆ ಸಹ ಶಿಕ್ಷಕರು ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande