
ನವದೆಹಲಿ, 20 ಜೂನ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಪ್ರಧಾನಿ ನರೇಂದ್ರ ಮೋದಿ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಧೈರ್ಯ, ಸರಳತೆ, ವಿನಯಶೀಲತೆ ಮತ್ತು ಸಾರ್ವಜನಿಕ ಸೇವೆಯತ್ತ ಅಚಲ ಬದ್ಧತೆಯಿಂದ ಕೂಡಿದ ರಾಷ್ಟ್ರಪತಿ ಮುರ್ಮು ಅವರ ಜೀವನ ಪಯಣ ದೇಶದ ಜನತೆಗೆ ನಿರಂತರ ಪ್ರೇರಣೆಯಾಗಿದೆ ಎಂದು ಹೇಳಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಹಲವು ವರ್ಷಗಳ ಸೇವೆಯ ಅವಧಿಯಲ್ಲಿ ಅವರು ರಾಷ್ಟ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ಸಮಾಜದ ಹಿಂದುಳಿದ ಹಾಗೂ ಅಂಚಿನಲ್ಲಿರುವ ವರ್ಗಗಳ ಕಲ್ಯಾಣದ ಬಗ್ಗೆ ಅವರಿಗಿರುವ ಕಾಳಜಿ ಶ್ಲಾಘನೀಯವಾಗಿದೆ ಎಂದು ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಭಾರತದ ಅಭಿವೃದ್ಧಿಯತ್ತ ರಾಷ್ಟ್ರಪತಿ ಮುರ್ಮು ಅವರ ಅಚಲ ಸಮರ್ಪಣೆ ಅತ್ಯಂತ ಪ್ರೇರಣಾದಾಯಕವಾಗಿದೆ ಎಂದು ಹೇಳಿರುವ ಪ್ರಧಾನಿ, ಅವರು ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯದೊಂದಿಗೆ ರಾಷ್ಟ್ರಸೇವೆಯಲ್ಲಿ ಮುಂದುವರಿಯಲಿ ಎಂದು ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.