ರಾಷ್ಟ್ರಪತಿ ದ್ರೌಪದಿ ಮುರ್ಮು ಜನ್ಮದಿನ ; ಶುಭಾಶಯ ಕೋರಿದ ಡಿ.ಕೆ. ಶಿವಕುಮಾರ್
ಬೆಂಗಳೂರು, 20 ಜೂನ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್, ರಾಷ್ಟ್ರಪತಿ ಮುರ್ಮು ಅವರ ಸಾರ್ವಜನಿಕ ಸೇವೆಯ ಬದ
Cm post


ಬೆಂಗಳೂರು, 20 ಜೂನ್ (ಹಿ.ಸ.) :

ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್, ರಾಷ್ಟ್ರಪತಿ ಮುರ್ಮು ಅವರ ಸಾರ್ವಜನಿಕ ಸೇವೆಯ ಬದ್ಧತೆ ದೇಶದ ಜನತೆಗೆ ನಿರಂತರ ಪ್ರೇರಣೆಯಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹೃತ್ಪೂರ್ವಕ ಜನ್ಮದಿನದ ಶುಭಾಶಯಗಳು. ಸಾರ್ವಜನಿಕ ಸೇವೆಯತ್ತ ಅವರ ಸಮರ್ಪಣೆ ಇಡೀ ರಾಷ್ಟ್ರಕ್ಕೆ ಸ್ಫೂರ್ತಿಯಾಗಿದೆ. ಅವರಿಗೆ ಉತ್ತಮ ಆರೋಗ್ಯ ಹಾಗೂ ರಾಷ್ಟ್ರಸೇವೆಯಲ್ಲಿ ಇನ್ನಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸುವ ಅವಕಾಶ ದೊರೆಯಲಿ ಎಂದು ಅವರು ಹಾರೈಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande