ಶ್ರೀ ತುಳಸಿಗಿರೀಶ್ವರನ ದರ್ಶನ ಪಡೆದ ಶಾಸಕ ಆರ್.ಬಿ. ತಿಮ್ಮಾಪುರ
ಬಾಗಲಕೋಟೆ, 20 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ತಾಲೂಕಿನ ಐತಿಹಾಸಿಕ ಹಾಗೂ ಪವಿತ್ರ ಕ್ಷೇತ್ರವಾದ ತುಳಸಿಗೇರಿ ಗ್ರಾಮಕ್ಕೆ ಶಾಸಕ ಆರ್.ಬಿ. ತಿಮ್ಮಾಪುರ ಅವರು ಭೇಟಿ ನೀಡಿ, ಆರಾಧ್ಯ ದೈವ ಶ್ರೀ ತುಳಸಿಗಿರೀಶ್ವರ (ಆಂಜನೇಯ ಸ್ವಾಮಿ) ದೇವರ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ನ
Temol


ಬಾಗಲಕೋಟೆ, 20 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ತಾಲೂಕಿನ ಐತಿಹಾಸಿಕ ಹಾಗೂ ಪವಿತ್ರ ಕ್ಷೇತ್ರವಾದ ತುಳಸಿಗೇರಿ ಗ್ರಾಮಕ್ಕೆ ಶಾಸಕ ಆರ್.ಬಿ. ತಿಮ್ಮಾಪುರ ಅವರು ಭೇಟಿ ನೀಡಿ, ಆರಾಧ್ಯ ದೈವ ಶ್ರೀ ತುಳಸಿಗಿರೀಶ್ವರ (ಆಂಜನೇಯ ಸ್ವಾಮಿ) ದೇವರ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.

ನಾಡಿನ ಸಮಸ್ತ ಜನತೆಯ ಸುಖ, ಶಾಂತಿ, ಸಮೃದ್ಧಿ ಹಾಗೂ ಒಳಿತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ ಅವರು, ಕ್ಷೇತ್ರದ ಜನರ ಆಶೀರ್ವಾದ ಹಾಗೂ ಅಭಿವೃದ್ಧಿಯ ಸಂಕಲ್ಪದೊಂದಿಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅನಿಲ್ ದಡ್ಡಿ, ಪ್ರಮುಖ ಮುಖಂಡರಾದ ವಾಯ್.ಎಚ್. ಪೂಜಾರಿ, ಪರಮಾನಂದ ಕುಟ್ಟರಟ್ಟಿ ಸೇರಿದಂತೆ ಪಕ್ಷದ ಮುಖಂಡರು, ಸ್ಥಳೀಯ ಪ್ರಮುಖರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

ಶಾಸಕ ಆರ್.ಬಿ. ತಿಮ್ಮಾಪುರ ಅವರ ಇತ್ತೀಚಿನ ದೇವಸ್ಥಾನ ಭೇಟಿ ಹಾಗೂ ಧಾರ್ಮಿಕ ಕ್ಷೇತ್ರಗಳ ಪ್ರವಾಸ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕ್ಷೇತ್ರದ ಜನತೆ ಹಾಗೂ ರಾಜಕೀಯ ವಲಯದಲ್ಲಿ “ಶಾಸಕರ ಟೆಂಪಲ್ ರನ್ ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಪ್ರಯತ್ನವೇ?” ಎಂಬ ಮಾತುಗಳು ಕೇಳಿ ಬರುತ್ತಿವೆ.

ಉತ್ತರ ಕರ್ನಾಟಕದ ಪ್ರಮುಖ ಮಾದಿಗ ಸಮುದಾಯದ ನಾಯಕರಲ್ಲಿ ಒಬ್ಬರಾಗಿರುವ ಆರ್.ಬಿ. ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಆಗ್ರಹಗಳು ಈ ಹಿಂದೆ ಕೂಡ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಅವರ ದೇವಸ್ಥಾನ ಭೇಟಿಗಳಿಗೆ ರಾಜಕೀಯ ಮಹತ್ವ ನೀಡಲಾಗುತ್ತಿದೆ.

ಆದರೆ, ಶಾಸಕರ ಕಡೆಯಿಂದ ಈ ಭೇಟಿಗಳು ಸಂಪೂರ್ಣವಾಗಿ ಧಾರ್ಮಿಕ ನಂಬಿಕೆ ಹಾಗೂ ಜನರ ಒಳಿತಿಗಾಗಿ ನಡೆಸಿದ ಕಾರ್ಯಕ್ರಮಗಳಾಗಿವೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಮುಂಬರುವ ದಿನಗಳಲ್ಲಿ ಸಚಿವ ಸ್ಥಾನದ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮುಂದುವರೆದಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande