ಎನ್ಟಿಎ ಅವಾಂತರ : ರಾಹುಲ್ ಗಾಂಧಿ ಕಿಡಿ
ನವದೆಹಲಿ, 20 ಜೂನ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್) ಮರುಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬನಿಗೆ ತಪ್ಪಾಗಿ ವಿದೇಶದ ಪರೀಕ್ಷಾ ಕೇಂದ್ರವನ್ನು ಹಂಚಿಕೆ ಮಾಡಿರುವ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವನ್ನು ಮುಂದಿಟ್ಟು
ರಾಹುಲ್ ಗಾಂಧಿ


ನವದೆಹಲಿ, 20 ಜೂನ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್) ಮರುಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬನಿಗೆ ತಪ್ಪಾಗಿ ವಿದೇಶದ ಪರೀಕ್ಷಾ ಕೇಂದ್ರವನ್ನು ಹಂಚಿಕೆ ಮಾಡಿರುವ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಲೋಕ ಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ನಾಗಪುರದ ವಿದ್ಯಾರ್ಥಿಯೊಬ್ಬನಿಗೆ ನೀಟ್ ಮರುಪರೀಕ್ಷೆಯ ಪ್ರವೇಶ ಪತ್ರದಲ್ಲಿ ಪರೀಕ್ಷಾ ಕೇಂದ್ರವಾಗಿ ಅಬುಧಾಬಿಯನ್ನು ನಿಗದಿಪಡಿಸಲಾಗಿದೆ ಎಂದು ಆರೋಪಿಸಿದರು.

ವಿದ್ಯಾರ್ಥಿಯ ಬಳಿ ಪಾಸ್ಪೋರ್ಟ್ ಇಲ್ಲದಿರುವುದಲ್ಲದೆ, ವಿದೇಶಕ್ಕೆ ತೆರಳಿ ಪರೀಕ್ಷೆ ಬರೆಯಲು ಅಗತ್ಯ ಆರ್ಥಿಕ ಸಾಮರ್ಥ್ಯವೂ ಕುಟುಂಬಕ್ಕಿಲ್ಲ ಎಂದು ಅವರು ತಿಳಿಸಿದರು.

ಪರೀಕ್ಷೆ ಸಮೀಪದಲ್ಲಿದ್ದ ಕಾರಣ ಈ ತಪ್ಪನ್ನು ಸರಿಪಡಿಸಿಕೊಳ್ಳಲು ವಿದ್ಯಾರ್ಥಿಗೆ ಸಾಕಷ್ಟು ಸಮಯವೂ ದೊರೆಯಲಿಲ್ಲ. ಈ ಆಡಳಿತಾತ್ಮಕ ಲೋಪದಿಂದ ವಿದ್ಯಾರ್ಥಿ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ರಾತ್ರಿ ಪೂರ್ತಿ ಅತ್ತಿದ್ದಾನೆ. ಪರಿಣಾಮವಾಗಿ ಪರೀಕ್ಷೆಗೆ ಹಾಜರಾಗುವುದೇ ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಾನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ದೇಶದ ಶಿಕ್ಷಣ ವ್ಯವಸ್ಥೆಯ ಮೇಲೆ ಈ ಘಟನೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳ ಭವಿಷ್ಯ, ಸಮಯ ಹಾಗೂ ಮಾನಸಿಕ ನೆಮ್ಮದಿಯೊಂದಿಗೆ ಪ್ರಸ್ತುತ ವ್ಯವಸ್ಥೆ ಆಟವಾಡುತ್ತಿದೆ ಎಂದು ಆರೋಪಿಸಿದ ಅವರು, ಇಂತಹ ನಿರ್ಲಕ್ಷ್ಯವನ್ನು ಸಹಿಸಲಾಗದು ಎಂದರು.

ವಿದ್ಯಾರ್ಥಿಗಳಿಗೆ ಹೆಚ್ಚು ಸಂವೇದನಾಶೀಲ, ಜವಾಬ್ದಾರಿಯುತ ಹಾಗೂ ಉತ್ತರದಾಯಕ ಪರೀಕ್ಷಾ ವ್ಯವಸ್ಥೆ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.

ಈ ಪ್ರಕರಣ ಬೆಳಕಿಗೆ ಬಂದ ತಕ್ಷಣ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿದೆ. ದೂರು ಸ್ವೀಕರಿಸಿದ ಕೂಡಲೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಎನ್ಟಿಎ, ಅಗತ್ಯ ಪರಿಶೀಲನೆ ಬಳಿಕ ಸಂಬಂಧಿತ ವಿದ್ಯಾರ್ಥಿಗೆ ನಾಗಪುರದಲ್ಲೇ ಪರೀಕ್ಷಾ ಕೇಂದ್ರವನ್ನು ಮರುಹಂಚಿಕೆ ಮಾಡಲಾಗುವುದು ಹಾಗೂ ಹೊಸ ಪ್ರವೇಶ ಪತ್ರವನ್ನು ನೀಡಲಾಗುವುದು ಎಂದು ಹೇಳಿದೆ.

ತಾಂತ್ರಿಕ ದೋಷದ ಕಾರಣದಿಂದ ವಿದ್ಯಾರ್ಥಿ ಅಬ್ದುಲ್ಲಾ ಮೊಹಮ್ಮದ್ ತಾಲಿಬ್ ಅವರಿಗೆ ತಪ್ಪಾಗಿ ಅಬುಧಾಬಿ ಪರೀಕ್ಷಾ ಕೇಂದ್ರ ನಿಗದಿಯಾಗಿತ್ತು. ಈ ತಪ್ಪನ್ನು ಸರಿಪಡಿಸುವ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲಾಗಿದೆ ಎಂದು ಎನ್ಟಿಎ ಸ್ಪಷ್ಟಪಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande