ಹೆಚ್ಚುತ್ತಿರುವ ಹಣದುಬ್ಬರದಿಂದ ಜನಜೀವನ ಸಂಕಷ್ಟ : ಖರ್ಗೆ
ನವದೆಹಲಿ, 20 ಜೂನ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗ ಹಾಗೂ ರೂಪಾಯಿ ಮೌಲ್ಯದ ಕುಸಿತದಿಂದ ಸಾಮಾನ್ಯ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದ್ದು, ಕೇಂದ್ರದ ಮೋದಿ ಸರ್ಕಾರದ ಆರ್ಥಿಕ ನೀತಿಗಳೇ ಇದಕ್ಕೆ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ
ಖರ್ಗೆ


ನವದೆಹಲಿ, 20 ಜೂನ್ (ಹಿ.ಸ.) :

ಆ್ಯಂಕರ್ : ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗ ಹಾಗೂ ರೂಪಾಯಿ ಮೌಲ್ಯದ ಕುಸಿತದಿಂದ ಸಾಮಾನ್ಯ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದ್ದು, ಕೇಂದ್ರದ ಮೋದಿ ಸರ್ಕಾರದ ಆರ್ಥಿಕ ನೀತಿಗಳೇ ಇದಕ್ಕೆ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ಅವರು, ಹೆಚ್ಚುತ್ತಿರುವ ಬೆಲೆ ಏರಿಕೆಯಿಂದ ಜನರ ಉಳಿತಾಯ ವೇಗವಾಗಿ ಕರಗುತ್ತಿದ್ದು, ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳ ಆರ್ಥಿಕ ಸ್ಥಿತಿ ಹದಗೆಡುತ್ತಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಚಿಲ್ಲರೆ ಹಣದುಬ್ಬರ ಏರಿಕೆಯಾಗುತ್ತಿರುವುದು ಜನರ ಖರೀದಿ ಸಾಮರ್ಥ್ಯವನ್ನು ಕುಗ್ಗಿಸಿದ್ದು, ಆಹಾರ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬಗಳ ಮಾಸಿಕ ವೆಚ್ಚ ಗಣನೀಯವಾಗಿ ಹೆಚ್ಚಾಗಿದೆ ಎಂದು ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಆಹಾರ ಹಣದುಬ್ಬರವು 4.78 ಶೇಕಡಾಗಿದ್ದು, ತರಕಾರಿ ಮತ್ತು ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯ ಜನರ ಕೈಗೆಟುಕದಂತಾಗಿದೆ ಎಂದು ಅವರು ಹೇಳಿದ್ದಾರೆ.

ವೈದ್ಯಕೀಯ ಸೇವೆಗಳ ವೆಚ್ಚದಲ್ಲೂ ಭಾರೀ ಏರಿಕೆ ಕಂಡುಬಂದಿದ್ದು, ಆರೋಗ್ಯ ಸಂಬಂಧಿತ ಖರ್ಚುಗಳು ಕುಟುಂಬಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ತಂದಿವೆ ಎಂದು ಅವರು ಆರೋಪಿಸಿದ್ದಾರೆ. ಹೆಚ್ಚುತ್ತಿರುವ ಜೀವನ ವೆಚ್ಚದಿಂದ ಜನರ ಉಳಿತಾಯ ಕ್ಷೀಣಿಸುತ್ತಿದ್ದು, ಭವಿಷ್ಯದ ಭದ್ರತೆ ಕುರಿತು ಆತಂಕ ಹೆಚ್ಚಾಗಿದೆ ಎಂದಿದ್ದಾರೆ.

ರೂಪಾಯಿ ಮೌಲ್ಯ ಕುಸಿಯುತ್ತಿರುವುದು ಹಾಗೂ ವಿದೇಶಿ ಹೂಡಿಕೆದಾರರು ಭಾರತದಿಂದ ದೂರ ಉಳಿಯುತ್ತಿರುವುದು ದೇಶದ ಆರ್ಥಿಕತೆಯ ಮೇಲಿನ ವಿಶ್ವಾಸ ಕುಸಿಯುತ್ತಿರುವುದಕ್ಕೆ ಸಂಕೇತವಾಗಿದೆ ಎಂದು ಖರ್ಗೆ ಹೇಳಿದ್ದಾರೆ. ಇದರ ಜೊತೆಗೆ ಯುವಜನರಿಗೆ ಉದ್ಯೋಗಾವಕಾಶಗಳ ಕೊರತೆ ಎದುರಾಗಿದ್ದು, ನಿರುದ್ಯೋಗ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

“ಒಂದು ಕಡೆ ಬಿಜೆಪಿ ಇತರ ಪಕ್ಷಗಳ ನಾಯಕರನ್ನು ತನ್ನತ್ತ ಸೆಳೆಯುವ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರೆ, ಮತ್ತೊಂದೆಡೆ ಸಾಮಾನ್ಯ ಜನರು ತಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಲು ಹೋರಾಟ ನಡೆಸುತ್ತಿದ್ದಾರೆ. ದೇಶದ ಜನರ ಸಮಸ್ಯೆಗಳಿಗಿಂತ ರಾಜಕೀಯ ಲಾಭಕ್ಕೇ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ” ಎಂದು ಖರ್ಗೆ ಟೀಕಿಸಿದ್ದಾರೆ.

ಕೇಂದ್ರ ಸರ್ಕಾರದ ಆರ್ಥಿಕ ನಿರ್ವಹಣೆ ಜನರ ನಿರೀಕ್ಷೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿರುವ ಅವರು, ಹೆಚ್ಚುತ್ತಿರುವ ಅಸಮಾನತೆ, ದುಬಾರಿ ಜೀವನ ಮತ್ತು ಉದ್ಯೋಗ ಕೊರತೆಯ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande