ಯಾದಗಿರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ; 620 ಹೊಸ ಬಸ್ ಗಳಿಗೆ ಅನುಮೋದನೆ
Cmdks


ಬೆಂಗಳೂರು, 20 ಜೂನ್ (ಹಿ.ಸ.) :

ಆ್ಯಂಕರ್ : ಯಾದಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ₹100 ಕೋಟಿ ವೆಚ್ಚದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಇದೇ ವೇಳೆ, ರಾಜ್ಯ ಸಾರಿಗೆ ನಿಗಮಗಳಿಗಾಗಿ ₹235 ಕೋಟಿ ವೆಚ್ಚದಲ್ಲಿ 620 ನೂತನ ಬಸ್ ಗಳ ಖರೀದಿಗೆ ಅನುಮತಿ ನೀಡಲಾಗಿದ್ದು, ಇದರಲ್ಲಿ 400 ಬಸ್ಗಳನ್ನು ಗ್ರಾಮೀಣ ಪ್ರದೇಶಗಳಿಗೆ ಹಾಗೂ 220 ಬಸ್ಗಳನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ರಾಜ್ಯದ 11 ಕಡೆಗಳಲ್ಲಿ ಎಲೆಕ್ಟ್ರಿಕ್ ಬಸ್ ಡಿಪೋಗಳ ಸ್ಥಾಪನೆಗೆ ₹112 ಕೋಟಿ ಹಾಗೂ ಸಂಡೂರಿನಲ್ಲಿ ₹30 ಕೋಟಿ ವೆಚ್ಚದ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೂ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande