ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ
ಮೈದಾನದಲ್ಲಿ
Bkh


ಬೆಂಗಳೂರು, 21 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ. ಹರಿಪ್ರಸಾದ್ ಅವರು ಭಾನುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಹರಿಪ್ರಸಾದ್ ಅವರಿಗೆ ಜವಾಬ್ದಾರಿ ಒಪ್ಪಿಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ಕಾರ್ಯಕರ್ತ ಬಿ.ಕೆ. ಹರಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸಿರುವುದು ಸಂತಸದ ವಿಚಾರ ಎಂದರು.

“ಕಾಂಗ್ರೆಸ್ನ ಶಕ್ತಿಯೇ ಈ ದೇಶದ ಶಕ್ತಿ. ನನ್ನ ಸಾಮರ್ಥ್ಯ ಮೀರಿ ಪಕ್ಷದ ಕಾರ್ಯಕರ್ತರಿಗೆ ಸೇವೆ ಸಲ್ಲಿಸಿದ್ದೇನೆ. ಸೋನಿಯಾ ಗಾಂಧಿಯವರ ಆಶೀರ್ವಾದವನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ಗೆ ದೊರೆತ ಭರ್ಜರಿ ಗೆಲುವಿನ ಕುರಿತು ಉಲ್ಲೇಖಿಸಿದ ಅವರು, “136 ಸ್ಥಾನಗಳ ವಿಜಯ ಕೇವಲ ಸಿದ್ದರಾಮಯ್ಯ ಮತ್ತು ನನ್ನಿಂದ ಬಂದದ್ದಲ್ಲ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಶ್ರಮ, ನಾಯಕರು ಹಾಗೂ ಜನರ ಬೆಂಬಲದಿಂದಲೇ ಈ ಸಾಧನೆ ಸಾಧ್ಯವಾಗಿದೆ,” ಎಂದು ಹೇಳಿದರು.

ಸಮಾರಂಭದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು, ಸಚಿವರು, ಶಾಸಕರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸಿ ನೂತನ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಶುಭಾಶಯ ಕೋರಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande