ಬಳ್ಳಾರಿ : ಹವಂಬಾವಿ ಪ್ರದೇಶದ 1.33 ಎಕರೆ ಸರ್ಕಾರಿ ಜಾಗ ಒತ್ತುವರಿ ತೆರವು
ಬಳ್ಳಾರಿ, 21 ಜೂನ್ (ಹಿ.ಸ.) : ಆ್ಯಂಕರ್ : ನಗರದ ಹವಂಬಾವಿ ಪ್ರದೇಶದ ಸಿರುಗುಪ್ಪ ರಸ್ತೆಯ ಕಾಲುವೆ ಬಳಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಜಾಗವನ್ನು ಕಂದಾಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ (ಗ್ರಾಮೀಣ) ವ್ಯಾಪ್ತಿಯ ಸರ್ವೆ ನಂಬರ್ 275 ರಲ್ಲಿ ಬರುವ ಸುಮಾರು
Bellary: Encroachment on 1.33 acres of government land in Havambavi area cleared


ಬಳ್ಳಾರಿ, 21 ಜೂನ್ (ಹಿ.ಸ.) :

ಆ್ಯಂಕರ್ : ನಗರದ ಹವಂಬಾವಿ ಪ್ರದೇಶದ ಸಿರುಗುಪ್ಪ ರಸ್ತೆಯ ಕಾಲುವೆ ಬಳಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಜಾಗವನ್ನು ಕಂದಾಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿ (ಗ್ರಾಮೀಣ) ವ್ಯಾಪ್ತಿಯ ಸರ್ವೆ ನಂಬರ್ 275 ರಲ್ಲಿ ಬರುವ ಸುಮಾರು 1.33 ಎಕರೆ ವಿಸ್ತೀರ್ಣದ ಜಾಗ ಸರ್ಕಾರಕ್ಕೆ ಸೇರಿದ್ದಾಗಿದೆ. ಇದನ್ನು ಕೆಲವರು ಕಾನೂನುಬಾಹಿರವಾಗಿ ಒತ್ತುವರಿ ಮಾಡಿಕೊಂಡಿದ್ದರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರ ನೇತೃತ್ವದಲ್ಲಿ ಬಳ್ಳಾರಿ ತಹಶೀಲ್ದಾರ್ ರೇಖಾ ಅವರು, ಪೊಲೀಸ್ ಸಿಬ್ಬಂದಿ ಹಾಗೂ ಕಂದಾಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಒತ್ತುವರಿಯನ್ನು ತೆರವುಗೊಳಿಸಿದ್ದಾರೆ. ಸ್ಥಳದಲ್ಲಿ ತಹಶೀಲ್ದಾರ್ ಕಚೇರಿಯಿಂದ ಅಧಿಕೃತ ಜಾಗೃತಿ ಹಾಗೂ ಎಚ್ಚರಿಕೆ ಫಲಕವನ್ನು ಅಳವಡಿಸಲಾಗಿದೆ.

ಇದೇ ವೇಳೆ ಹವಂಬಾವಿ ಪ್ರದೇಶದ ಸಿರುಗುಪ್ಪ ರಸ್ತೆಯ ಎಡಬದಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ವಾಣಿಜ್ಯ ಮತ್ತು ಇತರೆ ಕಟ್ಟಡಗಳನ್ನು ಜೆಸಿಬಿ ಯಂತ್ರಗಳ ಸಹಾಯದಿಂದ ನೆಲಸಮಗೊಳಿಸಲಾಯಿತು. ಕಾನೂನು ಬಾಹಿರವಾಗಿ ನಿರ್ಮಾಣಗೊಂಡಿದ್ದ ಗೋಡೆಗಳು ಹಾಗೂ ಶೆಡ್ಗಳನ್ನು ಯಶಸ್ವಿಯಾಗಿ ದ್ವಂಸಗೊಳಿಸಿದರು.

ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಸ್ಥಳೀಯ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದು ಸೂಕ್ತ ಬಂದೋಬಸ್ತ್ ಒದಗಿಸಿದ್ದರು.

ಸರ್ಕಾರಿ ಸ್ವತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಇನ್ನು ಮುಂದೆಯೂ ಇಂತಹ ಕಠಿಣ ಕ್ರಮಗಳನ್ನು ಮುಂದುವರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande